ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Picture of Savistara

Savistara

Bureau Report

ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದ್ದು ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಇದೇ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ:

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 1)

ಮಾರ್ಚ್ 18 – ಪ್ರಥಮ ಭಾಷೆ

ಮಾರ್ಚ್ 23 – ವಿಜ್ಞಾನ

ಮಾರ್ಚ್ 25 – ದ್ವಿತೀಯ ಭಾಷೆ

ಮಾರ್ಚ್ 28 – ಗಣಿತ

ಮಾರ್ಚ್ 30 – ತೃತೀಯ ಭಾಷೆ

ಏಪ್ರಿಲ್ 2 – ಸಮಾಜ ವಿಜ್ಞಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ (ಪರೀಕ್ಷೆ 2)

ಮೇ 18 – ಪ್ರಥಮ ಭಾಷೆ

ಮೇ 19 – ವಿಜ್ಞಾನ

ಮೇ 20 – ದ್ವಿತೀಯ ಭಾಷೆ

ಮೇ 21 – ಗಣಿತ

ಮೇ 22 – ತೃತೀಯ ಭಾಷೆ

ಮೇ 23 – ಸಮಾಜ ವಿಜ್ಞಾನ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆಬ್ರವರಿ 28 – ಕನ್ನಡ, ಅರೇಬಿಕ್

ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3 – ಇಂಗ್ಲಿಷ್

ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ,ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5 – ಇತಿಹಾಸ

ಮಾರ್ಚ್ 6 – ಭೌತಶಾಸ್ತ್ರ

ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾರ್ಚ್ 10 – ಅರ್ಥಶಾಸ್ತ್ರ

ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12 – ಹಿಂದಿ

ಮಾರ್ಚ್ 13 – ರಾಜ್ಯಶಾಸ್ತ್ರ

ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್‌, ಆರೋಗ್ಯ ರಕ್ಷಣೆ.

[t4b-ticker]
error: Content is protected !!