ಕರ್ನಾಟಕ ಸೇರಿ 22 ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆಗೆ ಸೂಚನೆ

Picture of Savistara

Savistara

Bureau Report

ಏಪ್ರಿಲ್‌ನಲ್ಲಿ ಎಸ್‌ಐಆರ್ | ಪೂರ್ವಸಿದ್ಧತಾ ಕಾರ್ಯಪೂರ್ಣಗೊಳಿಸಿ: ಚು.ಆಯೋಗ

ನವದೆಹಲಿ: ಈಗಾಗಲೇ 12 ರಾಜ್ಯಗಳಲ್ಲಿ ವಿಶೇಷ ಸಮಗ್ರಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಿರುವ ಚುನಾವಣಾ ಆಯೋಗವು ಏಪ್ರಿಲ್‌ನಿಂದ ಉಳಿದ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ.ಈ ಹಿನ್ನೆಲೆಯಲ್ಲಿ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಎಸ್‌ಐಆರ್‌ಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳನ್ನು ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಿದೆ. ಈ ಪ್ರಕ್ರಿಯೆಯು ಏಪ್ರಿಲ್ ತಿಂಗಳಲ್ಲಿ ಆರಂಭವಾಗುವ ನಿರೀಕ್ಷೆಯಿದೆ.

ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ್ ಹವೇಲಿ ಮತ್ತು ದಮನ್ ಮತ್ತು ದಿಯು, ಹರ್ಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಕರ್ನಾಟಕ, ಲಡಾಖ್, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದೆಹಲಿ, ಒಡಿಶಾ, ಪಂಜಾಬ್‌, ಸಿಕ್ಕಿಂ, ತ್ರಿಪುರ, ತೆಲಂಗಾಣ ಮತ್ತು ಉತ್ತರಾಖಂಡ್ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಈ ಹಿಂದೆ ಬಿಹಾರದಲ್ಲಿ ಮೊದಲ ಬಾರಿಗೆ ಈ ಎಸ್‌ಐಆರ್ ಪ್ರಕ್ರಿಯೆ ಆರಂಭಗೊಂಡು ಯಶಸ್ವಿಯಾಗಿತ್ತು. ಬಳಿಕ ಕಳೆದ ಅಕ್ಟೋಬರ್‌ನಲ್ಲಿ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿತು.

[t4b-ticker]
error: Content is protected !!