ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ದಾಖಲಾತಿ ವೇಳಾಪಟ್ಟಿ ಪ್ರಕಟ

Picture of Savistara

Savistara

Bureau Report

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಅಡಿ ದಾಖಲಾತಿ ಪ್ರಕ್ರಿಯೆ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 10ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಎಲ್‌ಕೆಜಿ ಮತ್ತು ಒಂದನೇ ತರಗತಿಗೆ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟು ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶಾಲಾವಾರು ಸೀಟುಗಳ ಸಂಖ್ಯೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಮಾರ್ಚ್ 11ರಿಂದ 12ರವರೆಗೆ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಇರಲಿದೆ. ಮಾರ್ಚ್ 16 ರಿಂದ ಏಪ್ರಿಲ್ 15 ರವರೆಗೆ ಆರ್‌.ಟಿ.ಇ. ಆಡಿ ದಾಖಲಾತಿ ಕೋರಿ ಪೋಷಕರು ಆನ್ಲೈನ್ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 21ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.ಏಪ್ರಿಲ್ 27ರಂದು ಆನ್ಲೈನ್ ಲಾಟರಿ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಏ. 29 ರಿಂದ ಮೇ 15 ರವರೆಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ. ಮೇ 19ರಂದು ಆನ್ಲೈನ್ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!