ಕೆಎಲ್‌ಇ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆ

Picture of Savistara

Savistara

Bureau Report

ಬೆಳಗಾವಿ: ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶ್ವಖ್ಯಾತಿಗಳಿಸಿರುವ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ (ಕೆಎಲ್‌ಇ) ಆಡಳಿತ ಮಂಡಳಿ ನೂತನ ಕಾರ್ಯಾಧ್ಯಕ್ಷರಾಗಿ ಅಮಿತ ಕೋರೆ ಆಯ್ಕೆಯಾಗಿದ್ದಾರೆ.

ನಗರದ ಕೆಎಲ್‌ಇ ಸಂಸ್ಥೆ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಜರುಗಿದ ನೂತನ ಆಡಳಿತ ಮಂಡಳಿ ಸಭೆಯಲ್ಲಿ ಅಮಿತ ಕೋರೆ ಅವರಿಗೆ ಕೆಎಲ್‌ಇ ಸಂಸ್ಥೆಯ ಸಾರಥ್ಯ ನೀಡಲಾಯಿತು. ಸಂಸ್ಥೆ ಕಾರ್ಯಾಧ್ಯಕ್ಷರಾಗಿ ನಿರಂತರ 42 ವರ್ಷಗಳ ಅವಧಿಯಲ್ಲಿ ಸಂಸ್ಥೆಯನ್ನು ಜಾಗತಿಕಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಡಾ.ಪ್ರಭಾಕರ ಕೋರೆ ಅವರ ಸ್ಥಾನವನ್ನು ಈಗ ಪುತ್ರ ಅಮಿತ ಕೋರೆ ವಹಿಸಿಕೊಂಡಿದ್ದಾರೆ.

1916ರಲ್ಲಿ ಸ್ಥಾಪನೆಗೊಂಡ ಕೆಎಲ್‌ಇ ಸೊಸೈಟಿ ದೇಶದ ಪ್ರಮುಖ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಗಳಲ್ಲೊಂದಾಗಿದ್ದು, ಶಾಲೆ, ಮಹಾವಿದ್ಯಾಲಯ, ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಸಂಸ್ಥೆಗಳು, ಅತ್ಯಾಧುನಿಕ ಗುಣಮಟ್ಟದ ಆಸ್ಪತ್ರೆ ಸೇರಿ 317ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಮುನ್ನಡೆಸುತ್ತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದೆ. ಇಂತಹ ಬೃಹತ್‌ ಸಂಸ್ಥೆ ಕಾರ್ಯಾಧ್ಯಕ್ಷರಾಗಿ 46ರ ವಯಸ್ಸಿನ ಯುವ ನಾಯಕ ಅಮಿತ ಆಯ್ಕೆಯಾಗಿರುವುದು ವಿಶೇಷ.

ಡಾ.ಪ್ರಭಾಕರ ಕೋರೆ ಗೌರವ ಕಾರ್ಯಾಧ್ಯಕ್ಷ

1984ರಿಂದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 42 ವರ್ಷ ಸೇವೆ ಸಲ್ಲಿಸಿ ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಕೊಂಡೊಯ್ದ ಡಾ.ಪ್ರಭಾಕರ ಕೋರೆ ಅವರ ಮಾರ್ಗದರ್ಶನವನ್ನು ಸಂಸ್ಥೆಯ ಶ್ರೇಯೋಭಿವೃದ್ಧಿಗೋಸ್ಕರ ಪಡೆಯಲು ಫೆ.8ರಂದು ಜರುಗಿದ ಕೆಎಲ್‌ಇ ಸರ್ವ ಸಾಧಾರಣ ಸಭೆಯಲ್ಲಿ ಅವರನ್ನು ಗೌರವಾನ್ವಿತ ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!