ಸಿಇಟಿ ಅರ್ಜಿ ಸಲ್ಲಿಕೆಗೆ ಫೆ.27ರವರೆಗೆ ಗಡುವು ವಿಸ್ತರಣೆ; ಅಭ್ಯರ್ಥಿಗಳಿಗೆ ಕೆಇಎ ಕೊನೆಯ ಅವಕಾಶ!

Picture of Savistara

Savistara

Bureau Report

ಬೆಂ ಗಳೂರು, ಫೆ.21: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 27 ಕೊನೆಯ ದಿನಾಂಕವಾಗಿದೆ.

ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರ ಪ್ರಕಾರ, ಇದು ಅಭ್ಯರ್ಥಿಗಳಿಗೆ ನೀಡಲಾಗುತ್ತಿರುವ ಕೊನೆಯ ಅವಕಾಶವಾಗಿದೆ. ಈ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಇರುವುದಿಲ್ಲ. ಇದುವರೆಗೆ ಒಟ್ಟು 3.18 ಲಕ್ಷ ಅಭ್ಯರ್ಥಿಗಳು ಯಶಸ್ವಿಯಾಗಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಮುಖ ದಿನಾಂಕಗಳು:

ಆನ್‌ಲೈನ್ ನೋಂದಣಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-02-2026 ರ ರಾತ್ರಿ 11:59 ರವರೆಗೆ.ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 03-03-2026 ರ ಸಂಜೆ 5:30 ರವರೆಗೆ.ಅರ್ಜಿ ಸಲ್ಲಿಸಿದವರ ಪೈಕಿ 2.18 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ‘ಸ್ಯಾಟ್ಸ್’ (SATS) ಮೂಲಕ ಆನ್‌ಲೈನ್‌ನಲ್ಲಿ ಪರಿಶೀಲಿಸಲಾಗಿದೆ. ಇನ್ನು 1.08 ಲಕ್ಷ ಅಭ್ಯರ್ಥಿಗಳ ದಾಖಲೆಗಳನ್ನು ಕಾಲೇಜು ಹಂತದಲ್ಲಿ ಪರಿಶೀಲನೆ ನಡೆಸಲಾಗಿದೆ. ಅಭ್ಯರ್ಥಿಗಳು ಕೊನೆಯ ಕ್ಷಣದ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ತಕ್ಷಣವೇ ಕೆಇಎ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA ತನ್ನ ಎಕ್ಸ್​​ ಖಾತೆಯಲ್ಲಿ ವಿವರವಾಗಿ ಹಂಚಿಕೊಂಡಿದೆ. ಅಧಿಕೃತ ವೆಬ್‌ಸೈಟ್ kea.kar.nic.in ಅಥವಾ cetonline.karnataka.gov.in, ಕೆಇಎ ವೆಬ್‌ಸೈಟ್‌ನ ‘UGCET 2026 Online Application’ ಲಿಂಕ್ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ವೇಳೆ ತಾಂತ್ರಿಕ ತೊಂದರೆ ಎದುರಾದರೆ 080-23460460 ಸಂಖ್ಯೆಗೆ ಕರೆ ಮಾಡಬಹುದು ಅಥವಾ keaugcet2026@gmail.com ಗೆ ಇಮೇಲ್ ಮಾಡಬಹುದು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!