ಬೆಂಗಳೂರು : ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಸೆರೆ

Picture of Savistara

Savistara

Bureau Report

ಬೆಂಗಳೂರು: ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರ ಅರ್ಷಾದ್ ಖಾನ್‌ ಅವರನ್ನು ರಾಷ್ಟ್ರೀಯ ತನಿಖಾ ದಳದ(ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ನಗರದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಹಾಗೂ ಗ್ರೆನೇಡ್‌ ಸಂಗ್ರಹಿಸಿಕೊಂಡಿದ್ದ ಆರೋಪದ ಮೇರೆಗೆ ಅರ್ಷಾದ್‌ ಖಾನ್‌ ಅವರನ್ನು ಈ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು.

ಬಳಿಕ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಹಸ್ತಾಂತರ ಮಾಡಲಾಗಿತ್ತು.’ಅರ್ಷಾದ್ ಖಾನ್ ಅವರಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ನಿಗದಿತ ದಿನದಂದು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗುವಂತೆಯೂ ನ್ಯಾಯಾಲಯ ಸೂಚಿಸಿತ್ತು. ಆದರೆ, ನಿಯಮದಂತೆ ಅವರು ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು’ ಎಂದು ಮೂಲಗಳು ಹೇಳಿವೆ.ಎನ್‌ಐಎ ವಿಶೇಷ ನ್ಯಾಯಾಲಯವು ಅರ್ಷಾದ್ ಖಾನ್ ವಿರುದ್ಧ ಬಂಧನ ವಾರಂಟ್‌ ಮಾಡಿ ಘೋಷಿತ ಅಪರಾಧಿ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.’ಶಂಕಿತ ಉಗ್ರ ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ಯಾರ ಜತೆಗೆ ಸಂಪರ್ಕದಲ್ಲಿದ್ದರು, ಬೇರೆ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಏನಾದರೂ ಸಂಚು ರೂಪಿಸಲಾಗಿತ್ತೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದು ಎನ್‌ಐಎ ಮೂಲಗಳು ಹೇಳಿವೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!