ಭಾರತ-ಅಮೆರಿಕದ ಮಾತುಕತೆ ಮರುನಿಗದಿ

Picture of Savistara

Savistara

Bureau Report

ನವದೆಹಲಿ: ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಪಠ್ಯವನ್ನು ಅಂತಿಮಗೊಳಿಸಲು ಸೋಮವಾರದಿಂದ ಆರಂಭವಾಗಬೇಕಿದ್ದ ಮಾತುಕತೆಯನ್ನು ಭಾರತ ಮತ್ತು ಅಮೆರಿಕದ ಅಧಿಕಾರಿಗಳು ಮರುನಿಗದಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾತುಕತೆಯು ವಾಷಿಂಗ್ಟನ್‌ನಲ್ಲಿ ಸೋಮವಾರದಿಂದ ಮೂರು ದಿನ ನಡೆಯಬೇಕಿತ್ತು.

‘ಈಚಿನ ಬೆಳವಣಿಗೆಗಳನ್ನು ಮತ್ತು ಅವುಗಳ ಪರಿಣಾಮವನ್ನು ಪರಿಶೀಲಿಸಲು ಎರಡೂ ಕಡೆಯವರಿಗೆ ಸಮಯ ಸಿಕ್ಕ ನಂತರದಲ್ಲಿ ಭಾರತದ ಅಧಿಕಾರಿಗಳ ತಂಡದ ಭೇಟಿಯನ್ನು ನಿಗದಿ ಮಾಡಬಹುದು ಎಂಬ ಅನಿಸಿಕೆಯನ್ನು ಎರಡೂ ದೇಶಗಳು ಅಧಿಕಾರಿಗಳು ಹೊಂದಿದ್ದಾರೆ. ಎರಡೂ ಕಡೆಯವರಿಗೆ ಹೊಂದಿಕೆ ಆಗುವ ಸಮಯದಲ್ಲಿ ಮಾತುಕತೆ ನಡೆಸಲಾಗುತ್ತದೆ’ ಎಂದು ಮೂಲಗಳು ಹೇಳಿವೆ.ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ವಿದೇಶಗಳಿಂದ ಆಮದು ಆಗುವ ಸರಕುಗಳ ಮೇಲೆ ವಿಧಿಸಿದ್ದ ಸುಂಕವನ್ನು ಅಲ್ಲಿನ ಸುಪ್ರೀಂ ಕೋರ್ಟ್‌ ಅನೂರ್ಜಿತಗೊಳಿಸಿದೆ. ಇದಾದ ನಂತರ ಟ್ರಂಪ್ ಅವರು ಎಲ್ಲ ದೇಶಗಳ ಸರಕುಗಳ ಮೇಲೆ ಶೇ 10ರಷ್ಟು ಸುಂಕ ವಿಧಿಸಿದ್ದಾರೆ. ನಂತರ ಸುಂಕವನ್ನು ಶೇ 15ಕ್ಕೆ ಹೆಚ್ಚಳ ಮಾಡುವುದಾಗಿಯೂ ಅವರು ಪ್ರಕಟಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!