ಕೊಡಗಿನ ನಾಪೋಕ್ಲುದಲ್ಲಿ ಭಾರೀ ಮಳೆ: ಕಾಫಿ ಬೆಳೆಗಾರರು ಖುಷ್

Picture of Savistara

Savistara

Bureau Report

ಕೊಡಗು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಬುಧವಾರ ಬೆಳಗಿನ ಜಾವ ಜಿಲ್ಲೆಯ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದ್ದರೆ, ಮಧ್ಯಾಹ್ನದ ವೇಳೆಗೆ ಕುಶಾಲನಗರ ತಾಲೂಕಿನ ಹಲವೆಡೆ ಸಾಧಾರಣ ಮಳೆ ಬಿದ್ದಿದೆ.ನಾಪೋಕ್ಲು ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮದಲ್ಲಿ ಉತ್ತಮ ಮಳೆಯಾಗಿದೆ.ನಾಪೋಕ್ಲು ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳು ಸೇರಿದಂತೆ ಬಲ್ಲಮಾವಟಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬುಧವಾರ ಉತ್ತಮ ಮಳೆ ಸುರಿಯಿತು.ನೆಲಜಿ, ಬಲ್ಲಮಾವಟಿ, ಪೇರೂರು, ದೊಡ್ಡಪುಲಿಕೋಟು, ಅಯ್ಯಂಗೇರಿ ಗ್ರಾಮಗಳಲ್ಲಿ ಗುಡುಗು ಸಹಿತ ಮಳೆಯಾಯಿತು .

ಬಲ್ಲಮಾವಟಿ ಗ್ರಾಮದ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಮಳೆಯಿಂದಾಗಿ ನೀರು ತುಂಬಿ ಹರಿಯಿತು.ಬುಧವಾರ ಸುರಿದ ಬಿರುಸಿನ ಮಳೆಯಿಂದ ಕಾಫಿಬೆಳೆಗಾರರು ಸಂತಸಪಟ್ಟರು. ಬಿರುಸಿನ ಮಳೆ ಕಾಫಿ ಹೂವರಳಲು ಸಹಕಾರಿಯಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!