BIG NEWS: ʼಗಣಿ’ ಧಣಿ ಜನಾರ್ದನ ರೆಡ್ಡಿಗೆ ಹೊಸ ಸಂಕಷ್ಟ! 884 ಕೋಟಿ ನಷ್ಟ ವಸೂಲಿ ಸಾಧ್ಯತೆ

Picture of Savistara

Savistara

Bureau Report

ಬಳ್ಳಾರಿ : ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (janardhan reddy) ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಕೆ ಕೇಸ್​ನಲ್ಲಿ 884 ಕೋಟಿ ನಷ್ಟ ವಸೂಲಿ ಮಾಡುವ ಸಾಧ್ಯತೆ ಇದೆ.

ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ.

ಬರೋಬ್ಬರಿ 884 ಕೋಟಿ ಹಣವನ್ನು ಜನಾರ್ದನ ರೆಡ್ಡಿಯಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ.ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಏನಿದು ಪ್ರಕರಣ?

ಆಂಧ್ರ-ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡ ಹೀರೆಹಾಳ್-ಸಿದ್ದಾಪುರ ಬಳಿಯ ಓಬಳಾಪುರಂ ಬೆಟ್ಟದಲ್ಲಿ ನಡೆದಿದ್ದ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಓಎಂಸಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸರೆಡ್ಡಿ ಮತ್ತು ಜನಾರ್ದನರೆಡ್ಡಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಈ ಕಂಪನಿಗೆ ಗಣಿ‌ಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ ಹಾಗೂ ಗಣಿ‌ ಇಲಾಖೆಯಿಂದಲೂ ಅಕ್ರಮ‌ ನಡೆದಿತ್ತು. ಇದರಲ್ಲಿ ರಾಜ್ಯದ 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದಾರೆ ಎನ್ನುವ ಆರೋಪವಿದೆ. ಈ ಪ್ರಕರಣದಲ್ಲಿ ಶ್ರೀನಿವಾಸರೆಡ್ಡಿ, ಜನಾರ್ದನ ರೆಡ್ಡಿ, ಆಪ್ತ ಅಲಿಖಾನ್, ಗಣಿ ಇಲಾಖೆಯ ನಿರ್ದೇಶಕ ರಾಜಗೋಪಾಲ್, ಆಂಧ್ರದ ಮಾಜಿ ಸಚಿವೆ ಸಬಿತಾ ಇಂದ್ರಾರೆಡ್ಡಿ, ನಿವೃತ್ತ ಐಎಎಸ್ ಅಧಿಕಾರಿ ಕೃಪಾನಂದ, ಶ್ರೀಲಕ್ಷ್ಮೀ ಇದ್ದಾರೆ.2009ರಲ್ಲಿ ಆಂಧ್ರದ ಅಂದಿನ ಮುಖ್ಯಮಂತ್ರಿ ಕಾಂಗ್ರೆಸ್‌ನ ರೋಸಯ್ಯ ಅವರು 2009 ರಲ್ಲಿ ಈ ಪ್ರಕರಣವನ್ನು‌ ಸಿಬಿಐ ತನಿಖೆಗೆ ನೀಡಿದ್ದರು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರ ಸೆಪ್ಟೆಂಬರ್ 5 ರಂದು ಜನಾರ್ದನ ರೆಡ್ಡಿ, ಶ್ರೀನಿವಾಸರೆಡ್ಡಿ ಸಿಬಿಐನಿಂದ ಬಂಧಿತರಾಗಿ, ಮೂರುವರೆ ವರ್ಷಗಳ ಕಾಲ ಚಂಚಲಗುಡ ಮತ್ತು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ವಾಸ ಅನುಭವಿಸಿದ್ದರು.

ಪ್ರಕರಣದಲ್ಲಿ ಟಪಾಲ್ ಗಣೇಶ ಮತ್ತವರ ಸಹೋದರ ಏಕಾಂಬರಂ, ಪ್ರಮುಖ ಸಾಕ್ಷಿಯಾಗಿದ್ದು, ಈಗಾಗಲೇ ಸಿಬಿಐ 3400 ಕ್ಕೂ ಹೆಚ್ಚು ದಾಖಲೆಗಳ‌ ಪರಿಶೀಲನೆ ಹಾಗೂ 219ಕ್ಕೂ ಹೆಚ್ವು ಸಾಕ್ಷಿಗಳ ವಿಚಾರಣೆ ನಡೆಸಿದೆ.ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿಗೆ ಹೋಗೇ ಹೋಗ್ತಾರೆ ಎಂದು ಟಪಾಲ್ ಗಣೇಶ್ ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಹಾಗೂ ಅವರ ಪಟಾಲಂನಿಂದ ಅನುಭವಿಸಿದ್ದ ಕಿರುಕುಳದ ಬಗ್ಗೆಯೂ ಇಂಚಿಂಚಾಗಿ ತೆರೆದಿಟ್ಟಿದ್ದರು.

[t4b-ticker]
error: Content is protected !!