ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ: 24×7 ಸಹಾಯವಾಣಿ ಆರಂಭ!

Picture of Savistara

Savistara

Bureau Report

ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿನ ಅನಿಶ್ಚಿತ ಪರಿಸ್ಥಿತಿಯಿಂದಾಗಿ ಆ ದೇಶಗಳ ವಾಯುಪ್ರದೇಶವನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ವಿಮಾನಯಾನದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ದುಬೈ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಕರ್ನಾಟಕದ ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕೂಡಲೇ ಕಾರ್ಯಪ್ರವೃತ್ತವಾಗಿದೆ.ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ಸೂಚನೆಯಂತೆ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಮತ್ತು ಜಿಲ್ಲಾ ಮಟ್ಟದ ಕೇಂದ್ರಗಳು (DEOC) 24×7 ಕಾರ್ಯನಿರ್ವಹಿಸುತ್ತಿವೆ.ದೆಹಲಿಯಲ್ಲಿರುವ ಕರ್ನಾಟಕ ಭವನದ ಅಧಿಕಾರಿಗಳು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕನ್ನಡಿಗರ ಸುರಕ್ಷಿತ ವಾಪಸಾತಿಗಾಗಿ ಶ್ರಮಿಸುತ್ತಿದ್ದಾರೆ.ಸಂಕಷ್ಟದಲ್ಲಿರುವವರು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು:ಪರಿಸ್ಥಿತಿಯು ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವುದರಿಂದ, ಪ್ರವಾಸಿಗರು ಮತ್ತು ಅಲ್ಲಿನ ನಿವಾಸಿಗಳು ರಾಯಭಾರ ಕಚೇರಿಯ ಸಲಹೆಗಳನ್ನು ಪಾಲಿಸಬೇಕು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ FRRO ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!