ಇರಾನ್‌ನಲ್ಲಿ ಹದಗೆಟ್ಟ ಪರಿಸ್ಥಿತಿ: ಮನೆಯಿಂದ ಹೊರಬರದಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

Picture of Savistara

Savistara

Bureau Report

ನವದೆಹಲಿ/ತೆಹ್ರಾನ್: ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ಭಾರತೀಯ ನಾಗರಿಕರು ಅತ್ಯಂತ ಜಾಗರೂಕರಾಗಿರಬೇಕು ಮತ್ತು ಸಾಧ್ಯವಾದಷ್ಟು ಮನೆಯೊಳಗೇ ಇರುವಂತೆ ಭಾರತೀಯ ರಾಯಭಾರ ಕಚೇರಿ ಮಂಗಳವಾರ ತುರ್ತು ಎಚ್ಚರಿಕೆ (Advisory) ನೀಡಿದೆ.ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, “ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ಅನಗತ್ಯ ಓಡಾಟವನ್ನು ತಪ್ಪಿಸಬೇಕು. ಪರಿಸ್ಥಿತಿ ತಿಳಿಯಾಗುವವರೆಗೂ ಸುರಕ್ಷಿತವಾಗಿ ಮನೆಯೊಳಗೇ ಇರುವುದು ಉತ್ತಮ,” ಎಂದು ತಿಳಿಸಿದೆ.

ರಾಯಭಾರ ಕಚೇರಿಯ ಪ್ರಮುಖ ಸೂಚನೆಗಳು:

-ಸ್ಥಳೀಯ ಸುದ್ದಿಗಳು ಮತ್ತು ರಾಯಭಾರ ಕಚೇರಿಯ ಅಧಿಕೃತ ಪ್ರಕಟಣೆಗಳನ್ನು ನಿರಂತರವಾಗಿ ಗಮನಿಸುತ್ತಿರಿ

-ರಾಯಭಾರ ಕಚೇರಿಯು ನೀಡುವ ಮುಂದಿನ ಮಾರ್ಗಸೂಚಿಗಳಿಗಾಗಿ ಕಾಯಿರಿ.

-ಸಾರ್ವಜನಿಕ ಸ್ಥಳಗಳು ಮತ್ತು ಪ್ರತಿಭಟನೆಗಳು ನಡೆಯುವ ಪ್ರದೇಶಗಳಿಂದ ದೂರವಿರಿ.

9,000 ಭಾರತೀಯರ ಸುರಕ್ಷತೆಯ ಆತಂಕಸದ್ಯ ಇರಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 9,000 ಕ್ಕೂ ಹೆಚ್ಚು ಭಾರತೀಯರು ನೆಲೆಸಿದ್ದಾರೆ ಎಂದು ಅಂದಾಜಿಸಲಾಗಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಗಳಿಂದಾಗಿ ಇರಾನ್‌ನಲ್ಲಿ ಆತಂಕ ಮನೆ ಮಾಡಿದ್ದು, ಭಾರತೀಯರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಕೆಲವು ದಿನಗಳಿಂದ ಗಲ್ಫ್ ರಾಷ್ಟ್ರಗಳಲ್ಲಿ ಸೇನಾ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಈಗಾಗಲೇ ಉನ್ನತ ಮಟ್ಟದ ಸಭೆ ನಡೆಸಿ ಅನಿವಾಸಿ ಭಾರತೀಯರ ಸುರಕ್ಷತೆಯ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ.

[t4b-ticker]
error: Content is protected !!