ಚುನಾವಣೆ ನಡೆಸದೇ ಖಾಲಿ ಆಗಿವೆ ಸ್ಥಳೀಯ ಸಂಸ್ಥೆಗಳು! ಶಾಸಕರಿಂದ ಕೆಳಗಿನ ಹಂತದಲ್ಲಿ ಯಾವುದೇ ಜನಪ್ರತಿನಿಧಿಗಳಿಲ್ಲ!

Picture of Savistara

Savistara

Bureau Report

ರಾಜ್ಯದಲ್ಲಿ ಸ್ಥಳೀಯ ಸಮಸ್ಯೆಗಳ ಚುನಾವಣೆ ವಿಳಂಬದ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಆಡಳಿತ ನಡೆಸಬೇಕಿದ್ದ ಸಂಸ್ಥೆಗಳು ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಖಾಲಿ ಆಗಿವೆ. ಗ್ರಾಮ ಪಂಚಾಯತ್ ಗಳಲ್ಲಿ ಆಡಳಿತಾಧಿಕಾರಿಯವರದ್ದೇ ಕಾರುಬಾರು.ಹೆಚ್ಚೂ ಕಡಿಮೆ ರಾಜ್ಯದ ಬಹುತೇಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಸಭೆ, ಪುರಸಭೆ, ಮಹಾನಗರ ಪಾಲಿಕೆ, ಗ್ರಾಮ ಪಂಚಾಯತ್ ಗಳು ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಖಾಲಿ ಆಗಿವೆ. ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳಿಲ್ಲದ ಕಾರಣ ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 3175 ಕೋಟಿ ರೂಪಾಯಿ ಕೇಂದ್ರದ ಅನುದಾನ ಸ್ಥಗಿತಗೊಂಡಿದೆ.ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಅವಧಿ ಮುಗಿದು ಈಗಾಗಲೇ ನಾಲ್ಕು ವರ್ಷಕ್ಕೂ ಅಧಿಕ ಸಮಯ ಕಳೆದಿದ್ದು, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಅಧೀನದಲ್ಲಿ ನಡೆಯಬೇಕಿದ್ದ ಅಭಿವೃದ್ಧಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿದ್ದ ಅನುದಾನದ ಹಣವು ಚುನಾಯಿತ ಜನಪ್ರತಿನಿಧಿಗಳಿಲ್ಲದೆ ವಾಪಸಾಗುವ ಭೀತಿ ಇದೆ.ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ಗಳ ಚುನಾಯಿತ ಜನಪ್ರತಿನಿಧಿಗಳ ಅವಧಿ ಮುಗಿದಿದ್ದು ಆಡಳಿತಾಧಿಕಾರಿಗಳ ನೇಮಕವಾಗಿದ್ದು ಅಧಿಕಾರಿಗಳೇ ಗ್ರಾಮಡಳಿತದ ಹೊಣೆ ಹೊತ್ತಿದ್ದಾರೆ. ಕೆಲವು ಕಡೆ ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ಮಾತ್ರ ಆಡಳಿತಾಧಿಕಾರಿಗಳು ಭೇಟಿ ನೀಡುತಿದ್ಫು ಅದರಿಂದ ಜನರ ಕೆಲಸಗಳ ಸರಾಗವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ.

[t4b-ticker]
error: Content is protected !!