ಹಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು, ಲೆಫ್ಟಿನೆಂಟ್ ಗವರ್ನರ್ ಗಳನ್ನು ನೇಮಿಸಿ ಆದೇಶ ಹೊರಡಿಸಿದ ರಾಷ್ಟ್ರಪತಿ

Picture of Savistara

Savistara

Bureau Report

ತಮಿಳುನಾಡಿನ ಆ‌ರ್.ಎನ್.ರವಿ ಪಶ್ಚಿಮ ಬಂಗಾಳಕ್ಕೆ ದಿಲ್ಲಿಯ ಸಸ್ಸೇನಾ ಲಡಾಖ್ ಗೆ

ಹೊಸದಿಲ್ಲಿ: ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನ‌್ರಗಳನ್ನು ನೇಮಿಸಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ.ರಾಷ್ಟ್ರಪತಿ ಭವನದಿಂದ ಗುರುವಾರ ಹೊರಡಿಸಿದ ಆದೇಶದ ಪ್ರಕಾರ, ಕೆಲವು ರಾಜ್ಯಪಾಲರನ್ನು ವರ್ಗಾವಣೆ ಮಾಡಲಾಗಿದ್ದು, ಕೆಲವರನ್ನು ಹೊಸದಾಗಿ ನೇಮಿಸಲಾಗಿದೆ.ತೆಲಂಗಾಣದ ರಾಜ್ಯಪಾಲರಾಗಿದ್ದ ಜಿಷ್ಣು ದೇವ್ ವರ್ಮಾ ಅವರನ್ನು ಮಹಾರಾಷ್ಟ್ರದ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲ ಶಿವ ಪ್ರತಾಪ್‌ ಶುಕ್ಲಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ ನೇಮಿಸಲಾಗಿದೆ.

ಬಿಹಾರದ ಮಾಜಿ ಸಚಿವ ನಂದ ಕಿಶೋರ್ ಯಾದವ್ ಅವರನ್ನು ನಾಗಾಲ್ಯಾಂಡ್ ರಾಜ್ಯಪಾಲರಾಗಿ ನೇಮಿಸಲಾಗಿದ್ದು, ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹುಸ್ಟೈನ್ ಅವರನ್ನು ಬಿಹಾರದ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಆನಂದ್‌ ಬೋಸ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಜ್ಯಪಾಲ ಆ‌ರ್.ಎನ್. ರವಿ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಈ ಮಧ್ಯೆ ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕ‌ರ್ ಅವರು ತಮಿಳುನಾಡಿನ ರಾಜ್ಯಪಾಲರ ಕಾರ್ಯಭಾರವನ್ನು ತಾತ್ಕಾಲಿಕವಾಗಿ ನಿರ್ವಹಿಸಲಿದ್ದಾರೆ.ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಿಸಲಾಗಿದೆ. ದಿಲ್ಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಸ್ಸೇನಾ ಅವರನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.ಅಮೆರಿಕಕ್ಕೆ ಭಾರತದ ಮಾಜಿ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರನ್ನು ದಿಲ್ಲಿಯ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!