ಮಲ್ಪೆಯಲ್ಲಿ ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆ-ಮೀನುಗಾರರಿಗೆ ಸಿಕ್ಕಿದ್ದೇನು

Picture of Savistara

Savistara

Bureau Report

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ

(ಮಾ.06) 2026-2027ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿ ಮೀನುಗಾರರಿಗೆ ಏನೇನು ಸೌಲಭ್ಯ ಸಿಕ್ಕಿದೆ ಎಂಬ ವಿವರ ಇಲ್ಲಿದೆ.

*ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.

*ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂಪಾಯಿ ಒದಗಿಸಲಾಗುವುದು.

*ಪರಿಶಿಷ್ಟ ಜಾರಿ/ ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.

*ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ಒದಗಿಸಲಾಗುವುದು.

*ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈಟೆಕ್ ಮತ್ರ್ಯದರ್ಶಿಯನ್ನು ಪ್ರಾರಂಭಿಸಲಾಗುವುದು.

*ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆ ನಿರ್ವಹಿಸಲು ಮಲ್ಟಿ-ಲೆವೆಲ್ ಪಾರ್ಕಿಂಗ್ ವ್ಯವಸ್ಥೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.

*ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!