ತಿರುಪತಿ ತಿರುಮಲ ಬೆಟ್ಟದಲ್ಲಿ ಬರ್ತಡೇ ಆಚರಣೆ ರೀಲ್ಸ್; ಇಬ್ಬರು ಬಿಗ್​ಬಾಸ್ ಸ್ಪರ್ಧಿಗಳ ವಿರುದ್ಧ ಕೇಸ್

Picture of Savistara

Savistara

Bureau Report

ಅಮರಾವತಿ: ಆಂಧ್ರ ಪ್ರದೇಶದ ಪ್ರಸಿದ್ಧ ಹಿಂದೂ ಧಾರ್ಮಿಕ ಕೇಂದ್ರ ಸ್ಥಳವಾದ ತಿರುಪತಿ ತಿರುಮಲ ಬೆಟ್ಟದಲ್ಲಿ ಕೇಕ್ ಕತ್ತರಿಸಿ, ರೀಲ್ಸ್ ಮಾಡಿ ಹುಟ್ಟುಹಬ್ಬ ಆಚರಣೆ ಮಾಡಿದ ಹಿನ್ನೆಲೆ ತೆಲುಗು ಬಿಗ್​ಬಾಸ್​ನ ಇಬ್ಬರು ಮಹಿಳಾ ಸ್ಪರ್ಧಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶುಕ್ರವಾರ(ಮಾ. 06) ವರದಿಯಾಗಿದೆ.

ಗುರುವಾರ(ಮಾ. 050 ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ತೆಲುಗು ಬಿಗ್​ಬಾಸ್ ರನ್ನರ್ ಆಪ್ ತನುಜಾ ಹುಟ್ಟು ಹಬ್ಬ ಆಚರಿಸಿಕೊಂಡಿದ್ದು, ಈ ವೇಳೆ ಸ್ಥಳದಲ್ಲಿ ಇನ್ನೊಬ್ಬ ಸ್ಪರ್ಧಿ ದುವ್ವಾಲ ಮಾಧುರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

ತಿರುಮಲದಲ್ಲಿ ಇಂತಹ ಆಚರಣೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಇದು ದೇವಾಲಯದ ಪಾವಿತ್ರ್ಯಕ್ಕೆ ವಿರುದ್ಧವಾಗಿದೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾದ ಬಳಿಕ ಟಿಟಿಡಿ ಅಧಿಕಾರಿಗಳು ಇಬ್ಬರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ

[t4b-ticker]
error: Content is protected !!