ಗ್ರಾಹಕರಿಗೆ ಬಿಗ್ ಶಾಕ್| ದಿಢೀರ್ ಏರಿಕೆಯಾದ ಎಲ್ ಪಿಜಿ ಸಿಲಿಂಡರ್ ಬೆಲೆ

Picture of Savistara

Savistara

Bureau Report

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ.

ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.ಈ ನಡುವೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ.

[t4b-ticker]
error: Content is protected !!