ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾದ ರಾಮ್ ರಹೀಮ್ ಸಿಂಗ್ ಖುಲಾಸೆ

Picture of Savistara

Savistara

Bureau Report

ಚಂಡೀಗಢ: ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ ಖುಲಾಸೆಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಮತ್ತು ನ್ಯಾಯಮೂರ್ತಿ ವಿಕ್ರಮ್ ಅಗರ್ವಾಲ್ ಅವರಿದ್ದ ಪೀಠ ಈ ತೀರ್ಪು ಪ್ರಕಟಿಸಿದೆ. ಆದಾಗ್ಯೂ ಈ ತೀರ್ಪನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಛತ್ರಪತಿ ಅವರ ಪುತ್ರ ಅನ್ಸುಲ್‌ ತಿಳಿಸಿದ್ದಾರೆ.

2002ರಲ್ಲಿ ಪತ್ರಕರ್ತ ಛತ್ರಪತಿ ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಮತ್ತು ಇತರ ಮೂವರು ತಪ್ಪಿತಸ್ಥರು ಎಂದು ಸಿಬಿಐ ನ್ಯಾಯಾಲಯ 2019ರಲ್ಲಿ ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು.ಈ ತೀರ್ಪು ಪ್ರಶ್ನಿಸಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಏಳು ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣದಿಂದ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.

ಗುರ್ಮೀತ್ ರಾಮ್ ರಹೀಂ ಸಿಂಗ್ ಅವರು, ಮಹಿಳಾ ಭಕ್ತರನ್ನು ಹೇಗೆ ಲೈಂಗಿಕವಾಗಿ ಶೋಷಣೆ ಮಾಡುತ್ತಾರೆ ಎಂಬ ಕುರಿತಾಗಿ ಛತ್ರಪತಿ ಅವರು ಪತ್ರಿಕೆಯೊಂದರಲ್ಲಿ ವರದಿ ಪ್ರಕಟಿಸಿದ್ದರು. ಇದಾಗಿ ಕೆಲ ದಿನಗಳ ಬಳಿಕ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿತ್ತು.ಇಬ್ಬರು ಮಹಿಳಾ ಭಕ್ತರು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮ್ ರಹೀಂ ಸದ್ಯ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. 2024ರಲ್ಲಿ, ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ರಾಮ್ ರಹೀಂನನ್ನು ಖುಲಾಸೆಗೊಳಿಸಿತ್ತು.

[t4b-ticker]
error: Content is protected !!