RSS ಬ್ಯಾನ್ ಮಾಡುತ್ತೇವೆ ಎಂದು ನಾವು ಯಾರೂ ಹೇಳಿಲ್ಲ, ಯಾರೂ ಬ್ಯಾನ್ ಮಾಡೋಕೆ ಆಗಲ್ಲ, ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ

Picture of Savistara

Savistara

Bureau Report

ಬೆಂಗಳೂರು : ಕಳೆದ 100 ವರ್ಷಗಳಲ್ಲಿ ಆರ್‌ಎಸ್‌ಎಸ್‌ ಹೆಮ್ಮರವಾಗಿ ಬೆಳೆದಿದೆ. ಆರ್‌ಎಸ್‌ಎಸ್‌ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ರಾಷ್ಟ್ರಾಭಿಮಾನದ ಚಟುವಟಿಕೆ ತಡೆಯಲು ಸಾಧ್ಯವಿಲ್ಲ. ಸಂಘದ ನೂರನೇ ವರ್ಷದ ಆಚರಣೆ ನಿಮಿತ್ತ ದೇಶದ ಮೂಲೆ ಮೂಲೆಯಲ್ಲಿ ಹಿಂದೂ ಸಮ್ಮೇಳನ ನಡೆಸಿ, ಹಿಂದೂಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಇದೊಂದು ಜಾಗತಿಕ ದಾಖಲೆಯಾಗಿದೆ. ಹಿಂದೂ ಸಮಾಜ ಒಟ್ಟಾಗಬೇಕು ಎನ್ನುವುದು ಕೋಟ್ಯಂತರ ಜನರ ಆಸೆಯಾಗಿದೆ. ಹಿಂದೂ ಆಚರಣೆ, ಸಂಸ್ಕೃತಿಯನ್ನು ಜಗತ್ತು ಒಪ್ಪಿಕೊಳ್ಳುತ್ತಿದೆ ಎಂದು ಮಾಜಿ ಸಂಸದ ಅನಂತಕುಮಾರ ಹೆಗಡೆ ಮಾರ್ಚ್ 8 ರಂದು ಭಾನುವಾರ ಭಟ್ಕಳದಲ್ಲಿ ನಡೆದ ಹಿಂದೂ ಸಂಗಮದಲ್ಲಿ ಸಭೆಯಲ್ಲಿ ಮಹತ್ವದ ಹೇಳಿಕೆ ನೀಡಿದ್ದರು.ಇದನ್ನೇ ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಗಳು ಬೆಂಗಳೂರಿನಲ್ಲಿ ಇಂದು ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಪ್ರಶ್ನಿಸಿದಾಗ, ‘’ಈ ಚರ್ಚೆ ಅನಗತ್ಯ’’ ಎಂದಿದ್ದಾರೆ, ಹಾಗೆಯೇ ಆರ್ ಎಸ್ ಎಸ್ ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಬ್ಯಾನ್ ಮಾಡೋಕೆ ಆಗಲ್ಲ ಎಂದು ಮಹತ್ವದ ಹೇಳಿಕೆ ನೀಡಿದ್ದಾರೆ.ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಾರೆ ಅಷ್ಟೇ, ಅಧಿಕೃತವಾಗಿ ಯಾರೂ ಬ್ಯಾನ್ ಮಾಡಿಲ್ಲ, ಬಹುಶಃ ಮಾಡೋಕೋ ಆಗಲ್ಲ ಎಂದಿದ್ದಾರೆ. ಮುಂದುವರೆದು ಮಾತನಾಡಿದ ಅವರು ಇದೀಗ ಈ ವಿಷಯ ಚರ್ಚೆ ವಿಷಯವಲ್ಲ, ಅನಗತ್ಯ ಚರ್ಚೆಯ ಅವಶ್ಯಕತೆಯಿಲ್ಲ ಎಂದಿದ್ದಾರೆ.ಸಚಿವ ಪ್ರಿಯಾಂಕ್ ಖರ್ಗೆ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬ ಆಗ್ರಹದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂಘಟನೆ ನಿಷೇಧಕ್ಕೂ ಚಟುವಟಿಕೆ ನಿರ್ಬಂಧಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಅವರು ಆರ್ ಎಸ್ ಎಸ್ ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!