ಇಂದು ದ.ಕ ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಅತೀ ಹೆಚ್ಚಳ !

Picture of Savistara

Savistara

Bureau Report

ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿಲ ತಾಪಮಾನ ಹೆಚ್ಚಳವಾಗಲಿದೆ IMD ಎಚ್ಚರಿಕೆ ನೀಡಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿಮಾಡಿದ್ದು ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಈ ಸರಳ ಕ್ರಮ ಪಾಲಿಸಿ: ಬಿಸಿಲಿನ ವೇಳೆ ಮನೆಯಲ್ಲೇ ಇರಬೇಕು.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲು ಹೆಚ್ಚು ಇರುವುದರಿಂದ ಈ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಿ. ಧಾರಾಳವಾಗಿ ನೀರು ಕುಡಿಯಿರಿ. ಬಾಯಾರಿಕೆ ಇಲ್ಲದಿದ್ದರೂ ಆಗಾಗ್ಗೆ ನೀರು ಕುಡಿಯಿರಿ. ಹೊರಗೆ ಹೋಗುವಾಗ ನೀರಿನ ಬಾಟಲಿ ಜೊತೆಗಿರಲಿ. ಸಾಧ್ಯವಾದಷ್ಟು ಕಾಟನ್ ಬಟ್ಟೆ ಧರಿಸಿ: ಹಗುರವಾದ, ಸಡಿಲವಾದ ಹತ್ತಿ ಬಟ್ಟೆ ಧರಿಸಿ. ಹೊರಗೆ ಹೋಗುವಾಗ ಛತ್ರಿ, ಟೋಪಿ ಅಥವಾ ಕರವಸ್ತ್ರ ಬಳಸಿ. ದೈಹಿಕ ಕ್ರಮ ತಪ್ಪಿಸಿ: ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಅತಿಯಾದ ದೈಹಿಕ ಶ್ರಮದ ಕೆಲಸ ಮಾಡಬೇಡಿ.ದೇಹ ತಂಪಾಗಿಸುವ ಪಾನೀಯ ಸೇವಿಸಿ: ಎಳನೀರು, ಮಜ್ಜಿಗೆ, ನಿಂಬೆ ಪಾನೀಯ ಅಥವಾ ORS ಸೇವಿಸಬೇಕು ಎಂದು ತಿಳಿಸಲಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!