ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ, ಗ್ರಾಹಕರು ಸಂತಸ

Picture of Savistara

Savistara

Bureau Report

ಬೆಂಗಳೂರು:ಕರ್ನಾಟಕದಲ್ಲಿ ಕಳೆದ ಕೆಲವು ವಾರಗಳಿಂದ ಮೊಟ್ಟೆ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ರೂ. 7.06 ಇದ್ದು ಒಂದು ಮೊಟ್ಟೆಯ ಬೆಲೆ ಇದೀಗ ರೂ.4.60ಕ್ಕೆ ಇಳಿಕೆಯಾಗಿದ್ದು ಇದು ಗ್ರಾಹಕರಲ್ಲಿ ಸಂತಸ ಮೂಡಿಸಿದ್ದರೆ, ಕೋಳಿ ಸಾಕಾಣಿಕೆದಾರರಲ್ಲಿ ಆತಂಕ ಮೂಡಿಸಿದೆ.
ರಫ್ತು ವ್ಯತ್ಯಯ, ಹಬ್ಬದ ಕಾಲದ ಬೇಡಿಕೆ ಕುಸಿತ ಹಾಗೂ ಬೇಸಿಗೆ ಪರಿಣಾಮ ಮೊಟ್ಟೆ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಕಳೆದ ಸುಮಾರು 15 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮೊಟ್ಟೆ ದರದಲ್ಲಿ ದೊಡ್ಡ ಮಟ್ಟದ ಇಳಿಕೆ ಕಂಡುಬಂದಿದೆ ಎಂದು ರಾಷ್ಟ್ರೀಯ ಮೊಟ್ಟೆ ಸಮನ್ವಯ ಸಮಿತಿ (ಎನ್‌ಇಸಿಸಿ) ತಿಳಿಸಿದೆ.
ರಾಜ್ಯದವಲ್ಲಿ ಪ್ರತಿದಿನ ಸುಮಾರು 2.2 ಕೋಟಿ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ಈ ಮೊಟ್ಟೆಗಳ ಒಂದು ಭಾಗವನ್ನು ತಮಿಳುನಾಡಿನ ನಾಮಕ್ಕಲ್ ಕೇಂದ್ರಕ್ಕೆ ಕಳುಹಿಸಿ ಅಲ್ಲಿಂದ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಸಾಮಾನ್ಯವಾಗಿ ನಾಮಕ್ಕಲ್ ನಿಂದ ದಿನಕ್ಕೆ ಸುಮಾರು 70 ಲಕ್ಷದಿಂದ 1 ಕೋಟಿ ಮೊಟ್ಟೆಗಳು ಗಲ್ಫ್ ದೇಶಗಳಿಗೆ ಸಾಗುತ್ತವೆ.
ಆದರೆ, ಯುದ್ಧ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ರಫ್ತು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆಗಳ ಸಂಗ್ರಹ ಹೆಚ್ಚಾಗಿದೆ ಎನ್ನಲಾಗಿದ್ದು, ಇದೂ ಕೂಡ ಬೆಲೆ ಕುಸಿತಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಹೊಸಪೇಟೆ ಮೊಟ್ಟೆ ಉತ್ಪಾದನೆಯಲ್ಲಿ ಪ್ರಮುಖ ಸ್ಥಾನದಲ್ಲಿದ್ದು, ನಂತರದ ಸ್ಥಾನವನ್ನು ಮೈಸೂರು ಪಡೆದುಕೊಂಡಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!