ದಿನ ಭವಿಷ್ಯ, ಮಾರ್ಚ್ 15, 2026: ಈ ರಾಶಿಗೆ ಇಂದು ಆಕಸ್ಮಿಕ ಧನಯೋಗದ ಸಾಧ್ಯತೆ

Picture of Savistara

Savistara

Bureau Report

ಬೆಂಗಳೂರು, ಮಾ. 14: ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು, ಫಾಲ್ಗುಣ ಮಾಸೆ, ಉತ್ತರಾಷಾಢ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿಗಳ ಭವಿಷ್ಯ ಹೇಗಿದೆ ಎನ್ನುವ ಬಗ್ಗೆ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ತಿಳಿಸಿದ್ದಾರೆ.

ಮೇಷ ರಾಶಿ: ಇಂದು ಉತ್ತರಾಷಾಢ ನಕ್ಷತ್ರ ಇದ್ದು, ರವಿ ಮೀನ ರಾಶಿಯನ್ನು ಪ್ರವೇಶ ಮಾಡುತ್ತಿದ್ದಾನೆ. ಹಾಗಾಗಿ ಹೆಚ್ಚಿನವರ ಪರಿಣಾಮ ಬೀರುವ ಸಾಧ್ಯತೆ ಇದೆ. ಮೇಷ ರಾಶಿಯವರಿಗೆ ಕಷ್ಟದದ ದಿನವಾಗಲಿದೆ. ನಿಮಗೆ ಬೇಕಾದಂತಹ ಕೆಲಸ ಕಾರ್ಯಗಳು ನಡೆಯದೆ ಇರಬಹುದು. ಹಣ ವ್ಯಯ ಆಗುವ ಸಾಧ್ಯತೆಗಳು ಇದೆ.

ವೃಷಭ ರಾಶಿ: ಇಂದು ವೃಷಭ ರಾಶಿಯವರಿಗೆ ಉತ್ತಮವಾದ ಫಲ ಗೋಚರವಾಗಲಿದೆ. ಇಷ್ಟಾರ್ಥ ಸಿದ್ದಿಯಾಗಲಿದ್ದು ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಎಲ್ಲೇ ಹೋದರು ನಿಮಗೆ ಹೆಚ್ಚು ಗೌರವ ಪ್ರಾಪ್ತಿಯಾಗುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯಲ್ಲಿರುವವರಿಗೆ ಕಾರ್ಯ ಕ್ಷೇತ್ರದಲ್ಲಿ ಯಶಸ್ಸು ಕಾಣ ಸಿಗಲಿದೆ. ಕೆಲಸದಲ್ಲಿ ಗೌರವ, ಬಡ್ತಿ ಸಿಗುವ ಸಾಧ್ಯತೆ ಇದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಯಶಸ್ಸು ಕಾಣುತ್ತೀರಿ.

ಕಟಕ ರಾಶಿ: ಕಟಕ ರಾಶಿಯವರಿಗೆ ಅದೃಷ್ಟದ ದಿನವಾಗಲಿದೆ. ಮನಸ್ಸಿಗೆ ನೆಮ್ಮದಿ ಇದ್ದು ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗುತ್ತದೆ.

ಸಿಂಹ ರಾಶಿ: ಸಿಂಹ ರಾಶಿಯವರಿಗೆ ಕಷ್ಟ ಗೋಚರವಾಗುತ್ತದೆ. ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಮುಖ್ಯವಾದ ವಿಚಾರದಲ್ಲಿ ಯಾವುದೇ ನಿರ್ಧಾರ ಮಾಡಲು ಇಂದು ಹೋಗುವುದು ಒಳಿತಲ್ಲ.

ಕನ್ಯಾ ರಾಶಿ: ಕನ್ಯಾ ರಾಶಿಯವರಿಗೆ ಸ್ವಲ್ಪ ಕಷ್ಟದ ದಿನವಾಗಲಿದೆ. ದಾಂಪತ್ಯ ಹಾಗೂ ಪ್ರೀತಿ-ಪ್ರೇಮ ವಿಚಾರದಲ್ಲಿ ಕಲಹ ಉಂಟಾಗುವ ಸಾಧ್ಯತೆ ಇದೆ. ವ್ಯವಹಾರದಲ್ಲೂ ಒಡಕು ಕಾಣುವ ಸಾಧ್ಯತೆ ಇದೆ.

ತುಲಾ ರಾಶಿ: ತುಲಾ ರಾಶಿಯವರಿಗೆ ಇಂದು ಕಷ್ಟಕರವಾದ ದಿನವಾಗಿದೆ. ಇಂದು ಅಷ್ಟೊಂದು ಪ್ರಾಶಸ್ತ್ಯವಾದ ದಿನ ಆಗಿರುವುದಿಲ್ಲ. ಹಾಗಾಗಿ ಯಾವುದೇ ಮುಖ್ಯ ನಿರ್ಧಾರ ಮಾಡಲು ಹೋಗಬೇಡಿ

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಅವರಿಗೆ ಉತ್ತಮವಾದ ದಿನವಾಗಿದೆ. ಮಾಧ್ಯಮದಲ್ಲಿ ಕೆಲಸ ಮಾಡೋರಿಗೆ ಲಾಭದಾಯಕವಾಗಿದ್ದು ಆರ್ಥಿಕ ಲಾಭ ವಾಗಲಿದೆ.

ಧನಸ್ಸು ರಾಶಿ: ಧನಸ್ಸು ರಾಶಿಗೆ ಸಂಸಾರದ ವಿಚಾರದಲ್ಲಿ ಹೆಚ್ಚಿನ ನೆಮ್ಮದಿ ಇರುತ್ತದೆ. ಕಾರ್ಯಕ್ಷೇತ್ರದಲ್ಲಿ ಕೂಡ ಅತೀ ಹೆಚ್ಚಿನ‌ ಲಾಭ ನೀವು ಕಾಣುತ್ತೀರಿ.

ಮಕರ ರಾಶಿ: ಮಕರ ರಾಶಿಯವರಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಸಿಗಲಿದ್ದು ಹಿಂದಿನ ದಿನದಲ್ಲಿ ಇದ್ದ ನೋವೆಲ್ಲ ಮಾಯವಾಗುತ್ತದೆ. ಮುಂದೆ ಏನು ಮಾಡಬೇಕು ಎನ್ನುವ ಮಾರ್ಗದರ್ಶನ ನಿಮಗೆ ಸಿಗುತ್ತದೆ.

ಕುಂಭರಾಶಿ: ಈ ರಾಶಿಯವರಿಗೆ ಕಷ್ಟಕರವಾದ ದಿನವಾಗುತ್ತದೆ‌. ಇಂದು ಹಣ ವ್ಯಯವಾಗುವ ಸಾಧ್ಯತೆ ಕೂಡ ಇರುತ್ತದೆ. ಯಾವುದೇ ನಿರ್ಧಾರ ಮಾಡಲು ಹೋಗಬೇಡಿ.

ಮೀನ ರಾಶಿ: ಮೀನ ರಾಶಿಗೆ ಉತ್ತಮವಾದ ದಿನವಾಗಿದೆ. ಮನಸ್ಸಿಗೆ ನೆಮ್ಮದಿ ಇದ್ದು ಇಷ್ಟಾರ್ಥ ಸಿದ್ದಿಯಾಗುತ್ತದೆ.

[t4b-ticker]
error: Content is protected !!