ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮುಂದಿನ ಒಂದು ವಾರದ ಕಾಲ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆವಿದೆ. ಶನಿವಾರದಂದು ದ.ಕ. ಉಡುಪಿ ಜಿಲ್ಲೆಯ ಕೆಲ ಭಾಗದಲ್ಲಿ ಉತ್ತಮ ಮಳೆಯಾಗಿತ್ತು.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದೆ.ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ ಶಿವಮೊಗ್ಗ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆ ಒಣಗಳು ಸೇರಿದಂತೆ, ಉತ್ತರ ಕರ್ನಾಟಕ ಕರಾವಳಿಯಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ತಿಳಿಸಿದೆ.
ರಾಜ್ಯದಲ್ಲಿ ಮಾರ್ಚ್ ಆರಂಭದಲ್ಲಿಯೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಶಾಖ ಸುಡುತ್ತಿದೆ. ಬೆಂಗಳೂರಿನಲ್ಲಿಯೂ ಹಗಲಿನ ವೇಳೆ ಬಿಸಿಲಿನ ತಾಪ ಹೆಚ್ಚಾಗಿರಲಿದ್ದು, ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ಬಿಸಿಲಿಗೆ ಮೈಯೊಡ್ಡದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.













































