ತಮಿಳುನಾಡು, ಕೇರಳ ಸೇರಿ ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ; ಪಶ್ಚಿಮ ಬಂಗಾಳದಲ್ಲಿ 2 ಹಂತದಲ್ಲಿ ಮತದಾನ

Picture of Savistara

Savistara

Bureau Report

ನವದೆಹಲಿ: ತಮಿಳುನಾಡು, ಕೇರಳ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದಚೇರಿ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕಾಗೋಷ್ಠಿಯಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿದರು.ಕೇರಳದಲ್ಲಿ

ಏಪ್ರಿಲ್ 9ರಂದು ಹಾಗೂ ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ಏಪ್ರಿಲ್ 23 ಹಾಗೂ 2ನೇ ಹಂತ ಏಪ್ರಿಲ್ 29ರಂದು ನಡೆಯಲಿದೆ. ಅಸ್ಸಾಂನ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಎಲ್ಲ ಚುನಾವಣೆಗಳ ಫಲಿತಾಂಶವು ಮೇ 4ರಂದು ಹೊರಬೀಳಲಿದೆ.ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 17.4 ಕೋಟಿ ಮತದಾರರು ಮತದಾನ ಮಾಡಲು ಅರ್ಹರಾಗಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾ‌ರ್ ಮಾಹಿತಿ ನೀಡಿದ್ದಾರೆ.

[t4b-ticker]
error: Content is protected !!