ಹೊಟೇಲ್‌ಗಳಿಗೆ ಎಲ್‌ಪಿಜಿ ಪೂರೈಸುವ ಕುರಿತು ಚರ್ಚೆ: ಸಚಿವ ಕೆ.ಎಚ್‌.ಮುನಿಯಪ್ಪ

Picture of Savistara

Savistara

Bureau Report

ಬೆಂಗಳೂರು : ವಾಣಿಜ್ಯ ಎಲ್‌ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್‌ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸೋಮವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಅನಿಲ ಪೂರೈಕೆ ಮಾಡುವ ತೈಲ ಕಂಪೆನಿಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಯಲಿದೆ. ಆನಂತರ ಮುಂದಿನ ನಿರ್ಧಾರವನ್ನು ತಿಳಿಸಲಾಗುವುದು ಎಂದು ಹೇಳಿದರು.

ಎರಡು ಕಾರ್ಗೋ ಹಡಗುಗಳು ಭಾರತಕ್ಕೆ ಬಂದಿರುವುದರಿಂದ ಎಲ್‌ಪಿಜಿ ಸಮಸ್ಯೆ ಕ್ರಮೇಣ ಬಗೆಹರಿಯುವ ಸಾಧ್ಯತೆಯಿದೆ. ಇರಾನ್, ಅಮೆರಿಕ-ಇಸ್ರೇಲ್ ನಡುವಿನ ಯುದ್ಧ ಇನ್ನೂ ನಿಂತಿಲ್ಲ. ಆದುದರಿಂದ, ಎಲ್‌ಪಿಜಿಯನ್ನು ಮಿತವಾಗಿ ಬಳಸುವುದು ಉತ್ತಮ ಎಂದು ಮುನಿಯಪ್ಪ ಸಲಹೆ ನೀಡಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!