ಉಡುಪಿ: ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ ಟ್ಯಾಂಕ‌ರ್ ಪಲ್ಟಿ

Picture of Savistara

Savistara

Bureau Report

ಉಡುಪಿ: ಅನಿಲ ಟ್ಯಾಂಕರೊಂದು ಕಟಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ಪಲ್ಟಿಯಾಗಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಅಗ್ನಿ ಶಾಮಕ ದಳದವರು ಟ್ಯಾಂಕರ್ ಮೇಲೆ ನಿರಂತರ ನೀರು ಹಾಯಿಸುವ ಮೂಲಕ ಪರಿಸ್ಥಿತಿ ನಿಯಂತ್ರಿಸಿದರು.

ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್‌ ಟ್ಯಾಂಕ‌ರ್ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್‌ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ತಿರುವು ಪಡೆಯುವ ವೇಳೆ ಪಲ್ಟಿ ಆಗಿದೆ ಎಂದು ಮೂಲಗಳು ತಿಳಿಸಿವೆ.ಟ್ಯಾಂಕ‌ರ್ ಪಲ್ಟಿಯಾದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.

ಸಂಚಾರಕ್ಕೆ ಬದಲಿ ವ್ಯವಸ್ಥೆ

ಸೋಮವಾರ ರಾತ್ರಿ 8 ಗಂಟೆಯವರೆಗೆ ಬದಲಿ ಮಾರ್ಗದ ವ್ಯವಸ್ಥೆ ಮಾಡಿ, ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವ -ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರಿ – ಬೆಳ್ಳಣ್ – ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು.ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ- ಶಿರ್ವ ಮಾರ್ಗವಾಗಿ ಕಾಪು ತಲುಪಿ, ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವ – ಬೆಳ್ಳಣ್ ಮಾರ್ಗವಾಗಿ ಪಡುಬಿದ್ರಿ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!