ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

Picture of Savistara

Savistara

Bureau Report

ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್ ಶಾಲಿನಿ ರಜನಿಶ್ ಸಭೆ ಕರೆದಿದ್ದಾರೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!