ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ| ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಕು. ತೇಜಸ್ವಿನಿ ಪೂಜಾರಿ ಇವರಿಗೆ ಗೌರವ ಸನ್ಮಾನ

Picture of Savistara

Savistara

Bureau Report

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ ಮಹಿಳಾ ಕ್ರೀಡಾಪಟುಗಳಿಗೆ ಕೊಡುತ್ತಿರುವ ಪ್ರೋತ್ಸಾಹ ಹಾಗೂ ಸೌಲಭ್ಯಗಳ ಬಗ್ಗೆ ಗಮನ ಸೆಳೆದರು. ತಾಲೂಕಿನ ಯುವ ವಕೀಲೆ ಕು. ಸೌಮ್ಯ ಪಿ ಇವರು ಉಪಸ್ಥಿತರಿದ್ದು, ಮಹಿಳೆಯರಿಗೆ ಕಾನೂನಿನ ಬಗ್ಗೆ ಮಾಹಿತಿಯನ್ನು ನೀಡಿದರು.

ಜಿಲ್ಲಾ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಮಾತನಾಡಿ ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರಕಾರ ಕೊಡುತ್ತಿರುವ ಮಹತ್ವದ ಬಗ್ಗೆ ತಿಳಿಸಿದರು. ಬೆಳ್ತಂಗಡಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಬೆಳಾಲು ಇವರು ಮಾತನಾಡಿ ,ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗುವುದರ ಜೊತೆಗೆ ತಮ್ಮ ಆರೋಗ್ಯಕ್ಕೂ ಮಹತ್ವ ಕೊಡಬೇಕು. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಸಿರಿಧಾನ್ಯಕ್ಕೆ ಹೆಚ್ಚಿನ ಮಹತ್ವವನ್ನು ಕೊಡಬೇಕು ಅನ್ನುವ ವಿಚಾರದ ಬಗ್ಗೆ ಉತ್ತಮ ಮಾಹಿತಿಯನ್ನು ನೀಡಿದರು. ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.ವಂದೇ ಮಾತರಂ ಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ನಿರೂಪಿಸಿ, ಸ್ವಾಗತಿಸಿ ,ಶ್ರೀಮತಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಶ್ರೀಮತಿ ಕಮಲಾಕ್ಷಿ, ಬಿಜೆಪಿ ಬೆಳ್ತಂಗಡಿ ಮಂಡಲದ ಕಾರ್ಯದರ್ಶಿ ಶ್ರೀಮತಿ ಆಶಾ ಸಲ್ಧಾನ ,ಪಂಚಾಯತ್ ಮಾಜಿ ಅಧ್ಯಕ್ಷರುಗಳು, ಪಂಚಾಯತ್ ಸದಸ್ಯರುಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!