ಬಂಗಾಳ ಸಮರಕ್ಕೆ ಟಿಎಂಸಿ ರಣಕಹಳೆ: ಮಮತಾ ಬ್ಯಾನರ್ಜಿ ಸೇರಿ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

Picture of Savistara

Savistara

Bureau Report

ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಇಂದು ತನ್ನ 291 ಅಭ್ಯರ್ಥಿಗಳ ಬೃಹತ್‌ ಪಟ್ಟಿಯನ್ನು ಪ್ರಕಟಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಿಂದಲೇ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.ಪಟ್ಟಿಯಲ್ಲಿ ಒಟ್ಟು 52 ಮಹಿಳಾ ಅಭ್ಯರ್ಥಿಗಳಿಗೆ ಸ್ಥಾನ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಎಸ್‌ಸಿ/ಎಸ್‌ಟಿ ಸಮುದಾಯದ 95 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಲಾಗಿದೆ.ಒಟ್ಟು 294 ಸ್ಥಾನಗಳ ಪೈಕಿ 3 ಸ್ಥಾನಗಳನ್ನು (ಕಾಲಿಂಪಾಂಗ್, ಡಾರ್ಜಿಲಿಂಗ್ ಮತ್ತು ಕುರ್ಸಿಯೋಂಗ್) ಅನಿತ್ ಥಾಪಾ ನೇತೃತ್ವದ ಭಾರತೀಯ ಗೂರ್ಖಾ ಪ್ರಜಾತಂತ್ರಿಕ್ ಮೋರ್ಚಾ ಪಕ್ಷಕ್ಕೆ ಬಿಟ್ಟುಕೊಡಲಾಗಿದೆ.ಈ ಬಾರಿಯ ಚುನಾವಣೆ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಕಳೆದ ಬಾರಿ ಮಮತಾ ಬ್ಯಾನರ್ಜಿ ಅವರನ್ನೇ ಸೋಲಿಸಿದ್ದ ಸುವೇಂದು ಅಧಿಕಾರಿ ಅವರು ಈ ಬಾರಿಯೂ ನಂದಿಗ್ರಾಮದಿಂದ ಕಣಕ್ಕಿಳಿಯಲಿದ್ದಾರೆ. ಇವರ ವಿರುದ್ಧ ಟಿಎಂಸಿ ಪಬಿತ್ರ ಕರ್ ಅವರನ್ನು ಕಣಕ್ಕಿಳಿಸಿದೆ. ಇಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಅಧಿಕಾರಿ ನಡುವೆ ನೇರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳದ 294 ಸದಸ್ಯ ಬಲದ ವಿಧಾನಸಭೆಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ:

ಮೊದಲ ಹಂತ: ಏಪ್ರಿಲ್ 23

ಎರಡನೇ ಹಂತ: ಏಪ್ರಿಲ್ 2

ಫಲಿತಾಂಶ: ಮೇ 4 ರಂದು ಮತ ಎಣಿಕೆ ನಡೆಯಲಿದ್ದು, ಬಂಗಾಳದ ಗದ್ದುಗೆ ಯಾರಿಗೆ ಎಂಬುದು ಅಂದು ನಿರ್ಧಾರವಾಗಲಿದೆ.

ಈ ಹಿಂದೆ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಅವರ ನಡೆ ಈ ಬಾರಿಯ ಚುನಾವಣೆಯ ಮೇಲೆ ತೀವ್ರ ಪರಿಣಾಮ ಬೀರುವ ನಿರೀಕ್ಷೆಯಿದೆ.

[t4b-ticker]
error: Content is protected !!