ಕನ್ನಡಿಗರು ಉದ್ಯೋಗಕ್ಕಾಗಿ, ಬಡ್ತಿಗಾಗಿ ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ರೈಲ್ವೆ ಪರೀಕ್ಷೆ ಮುಂದೂಡಿದಕ್ಕೆ ಸಿಎಂ ಕೆಂಡಾಮಂಡಲ

Picture of Savistara

Savistara

Bureau Report

ಬೆಂಗಳೂರು: ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ತೆಗೆದ ವಿಚಾರವಾಗಿ ರಾಜ್ಯದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ರೈಲ್ವೆ ನೇಮಕಾತಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಬಳಿಕ ವಿವಿಧ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲೆ ಇಲಾಖೆ ಇಂದಿನ ಪರೀಕ್ಷೆಯನ್ನು ಮುಂದೂಡಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ನೈರುತ್ಯ ರೈಲ್ವೆ ಇಲಾಖೆ ನಡೆಯನ್ನು ಖಂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಮಧ್ಯೆಪ್ರವೇಶಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ನೈರುತ್ಯ ರೈಲ್ವೆ ಇಲಾಖೆಯ 194 ಗೂಡ್ಸ್‌ ರೈಲು ಮ್ಯಾನೇಜರ್‌ ಹುದ್ದೆಗಳು ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ 101 ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂಬಂಧ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಕನ್ನಡಿಗರು ಹಾಗೂ ಕನ್ನಡ ಸಂಘಟನೆಗಳ ಭಾರೀ ವಿರೋಧದ ತರುವಾಯ ರೈಲ್ವೆ ಇಲಾಖೆಯೂ ದಿಢೀರನೇ ರದ್ದುಪಡಿಸಿ ಕನ್ನಡಿಗ ಉದ್ಯೋಗಿಗಳನ್ನು ಅತಂತ್ರ ಪರಿಸ್ಥಿತಿಗೆ ತಳ್ಳಿದೆ ಎಂದಿದ್ದಾರೆ. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬಗ್ಗೆ ಈ ಮೊದಲೇ ಸಾವಿರಾರು ಕನ್ನಡಿಗ ಉದ್ಯೋಗಿಗಳು ಧ್ವನಿಯೆತ್ತಿದ್ದರು. ಶಾಂತ ರೀತಿಯ ಪ್ರತಿಭಟನೆಯನ್ನು, ಪ್ರತಿರೋಧವನ್ನು ನಿರ್ಲಕ್ಷಿಸುತ್ತಾ ಬಂದ ರೈಲ್ವೆ ಇಲಾಖೆ ಪರೀಕ್ಷೆ ಆರಂಭವಾಗುವ ಕೊನೆ ಕ್ಷಣದಲ್ಲಿ ರದ್ದುಮಾಡಿರುವುದು ಈಗಿನ ಗೊಂದಲಕ್ಕೆ ಕಾರಣವಾಗಿದೆ ಎಂದು ಕಿಡಿಕಾರಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!