ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ನಿತ್ಯಾನಂದ ನಗರ ಶ್ರೀ ರಾಮ ಭಗವಾನ್ ನಿತ್ಯಾನಂದ ದೇವಸ್ಥಾನದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಹಾಗೂ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾಮಹೋತ್ಸವ ಸಂದರ್ಭ ಮಾ. 21ರಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಭೇಟಿ ನೀಡಿದರು.
ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ1008 ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಶಾಲು ಹೊದಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವಬಿಲ್ಲವ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಎಮ್. ಕೆ. ಪ್ರಸಾದ್,ಉಪಾಧ್ಯಕ್ಷರ ಮನೋಜ್ ಕುಂಜರ್ಪ, ಸಂಘಟನಾ ಕಾರ್ಯದರ್ಶಿ ಉದಯ ಪೂಜಾರಿ ಉಪಸ್ಥಿತರಿದ್ದರು.













































