ಬೆಂಗಳೂರು : ರಾಜ್ಯದ ಕುತೂಹಲ ಕೆರಳಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳನ್ನು ಘೋಷಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಕುಟುಂಬದ ಕುಡಿ ಸಮರ್ಥ್ ಮಲ್ಲಿಕಾರ್ಜುನ್ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ಹಿರಿಯ ನಾಯಕ ಎಚ್.ವೈ.ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ.ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಮಾಜಿ ಸಚಿವ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಎ.9 ರಂದು ಉಪಚುನಾವಣೆ ನಡೆಯಲಿದೆ.
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ
Savistara
Bureau Report
[t4b-ticker]













































