ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್‌ ಪೂರೈಕೆ ಶೇ.50ಕ್ಕೆ ; ಹೊಟೇಲುಗಳಿಗೆ ಕೇಂದ್ರ ಸರ್ಕಾರ ಗುಡ್‌ ನ್ಯೂಸ್

Picture of Savistara

Savistara

Bureau Report

ನವದೆಹಲಿ, ಮಾರ್ಚ್ 21: ಗ್ಯಾಸ್ ಸಿಲಿಂಡರ್ ಗಳಿಲ್ಲದೆಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡ‌ರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬೆನ್ನಲ್ಲೇ ಎಲ್ ಪಿಜಿ ಹೆಚ್ಚಳದ ಆದೇಶ ಹೊರಬಿದ್ದಿದೆ.ಮನೆಗಳಿಗೆ ಪೂರೈಸುವ ಅಡುಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಸಹಾಯವಾಗುತ್ತಿದೆ. senan ರಾಜ್ಯಗಳು ತರಲು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧದಿಂದಾಗಿ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್‌ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಲಿದೆ. ಮಾರ್ಚ್ 23ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದ ವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ అనిల ಸಚಿವಾಲಯ ತಿಳಿಸಿದೆ.

Advertisement

ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!