ಭಾರತದ ರಾಜಕೀಯ ಇತಿಹಾಸದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಮಿಂಗ್ ಅವರ ದಾಖಲೆಯನ್ನು ಅವರು ಮೀರಿದ್ದಾರೆ.ಚಾಮ್ಲಂಗ್ ಅವರು ಮುಖ್ಯಮಂತ್ರಿ ಆಗಿ 8,930 ದಿನಗಳ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ್ದರೆ, ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಯಾಗಿ ಒಟ್ಟಾರೆ 8,931 ದಿನಗಳ ಸೇವೆ ಪೂರೈಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈ ಸಾಧನೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನಾಯಕತ್ವದಲ್ಲಿ ಅವರ ದೀರ್ಘ ಪಯಣವನ್ನು ಪ್ರತಿಬಿಂಬಿಸುತ್ತಿದೆ.ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ಮೋದಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೂಲಕ ರಾಜಕೀಯಕ್ಕೆ ಪ್ರವೇಶಿಸಿ, ನಂತರ ಬಿಜೆಪಿ ಪಕ್ಷದಲ್ಲಿ ಪ್ರಮುಖ ನಾಯಕನಾಗಿ ಹೊರಹೊಮ್ಮಿದರು. 2001ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಅವರು, 2014ರಲ್ಲಿ ದೇಶದ ಪ್ರಧಾನಮಂತ್ರಿಯಾಗಿ ಆಯ್ಕೆಯಾದರು.
2014ರಿಂದ ನಿರಂತರವಾಗಿ ಅಧಿಕಾರದಲ್ಲಿರುವ ಅವರು, ಮೂರು ಬಾರಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿ ತಮ್ಮನಾಯಕತ್ವವನ್ನು ಬಲಪಡಿಸಿದ್ದಾರೆ.ಇದಲ್ಲದೆ, 2025ರಲ್ಲಿ ಇಂದಿರಾ ಗಾಂಧಿ ಅವರನ್ನು ಮೀರಿಸಿ ನಿರಂತರ ಅವಧಿಯಲ್ಲಿ ಸೇವೆ ಸಲ್ಲಿಸಿದ ಎರಡನೇ ದೀರ್ಘಕಾಲದ ಪ್ರಧಾನಮಂತ್ರಿಯಾಗಿದ್ದಾರೆ. ಒಟ್ಟಾರೆ, ಮೋದಿ ಅವರ ಈ ಸಾಧನೆ ರಾಜಕೀಯ ದೀರ್ಘಾಯುಷ್ಯ ಮತ್ತು ಜನಮನ್ನಣೆ ಎರಡನ್ನೂ ತೋರಿಸುತ್ತದೆ.













































