ಭದ್ರಾವತಿ ತಾಲೂಕಿನ ತಾರೀಕಟ್ಟೆಯ ಗೊಂದಿ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಅಭ್ಯುದಯ ಸೇವಾ ಟ್ರಸ್ಟ್‌ನ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಬಿವೈ ಭಾಗವಹಿಸಿ, ಶ್ರೀ ಗುರುಗಳ ಆಶೀರ್ವಾದ ಪಡೆದುಕೊಂಡರು .

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಪ್ರಸನ್ನನಾಥ ಮಹಾಸ್ವಾಮಿಗಳವರು ಸೇರಿದಂತೆ ವಿವಿಧ ಮಠಾಧೀಶರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮವು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಸ್ಥಾಪಿತವಾಗಿರುವ ಈ ಟ್ರಸ್ಟ್,

ಮುಂಬರುವ ದಿನಗಳಲ್ಲಿ ಶಿಕ್ಷಣ, ಸಂಸ್ಕೃತಿ ಮತ್ತು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿ ಎಂದು ರಾಘವೇಂದ್ರ ಬಿ ವೈ ಈ ಸಂದರ್ಭದಲ್ಲಿ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು, ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಬಿ.ಕೆ. ಶ್ರೀನಾಥ್ ಅವರು ಹಾಗೂ ಭಾಗವಹಿಸಿದ್ದ ಎಲ್ಲಾ ಭಕ್ತಾದಿಗಳು ಮತ್ತು ಹಿರಿಯರಿಗೆ ಅಭಿನಂದನೆಗಳು.













































