ಬೆಂಗಳೂರು: ರಾಜ್ಯದಲ್ಲಿ 5,950 ಗ್ರಾ.ಪಂ.ಗಳಲ್ಲಿ ಸದ್ಯ 96 ಸಾವಿರಕ್ಕೂ ಅಧಿಕಸಂಖ್ಯೆಯ ಸದಸ್ಯರಿದ್ದಾರೆ. ಹಾಲಿ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸದಸ್ಯರ ಸಂಖ್ಯೆ ಗುರುತಿಸಲು 4 ವಾರ ಹಾಗೂ ಆನಂತರ ಮೀಸಲು ಪ್ರಕ್ರಿಯೆ ಅಂತಿಮಗೊಳಿಸಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲು ಕನಿಷ್ಠ 3 ತಿಂಗಳು ಕಾಲಾವಕಾಶ ಬೇಕು ಎಂದು ಸರಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ.ಹೀಗಾಗಿ, ಸದ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಯವುದಿಲ್ಲ ಎಂಬುದು ಬಹುತೇಕ ಖಾತ್ರಿಯಾಗಿದೆ.ಈ ಮಧ್ಯೆ, ರಾಜ್ಯದ 47 ನಗರಸಭೆ, 9) ಪುರಸಭೆ, 49 ಪಟ್ಟಣ ಪಂಚಾಯಿತಿಗಳೂ ಸೇರಿದಂತೆ ಅವಧಿ ಮುಗಿದು ಚುನಾವಣೆ ನಡೆಯಬೇಕಿರುವ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 167 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆ ಕಾರ್ಯ ಮುಗಿದಿದೆ ಎಂದು ಸರಕಾರ, ಹೈಕೋರ್ಟ್‌ಗೆ ವರದಿ ನೀಡಿದೆ.
ಗ್ರಾಪಂ ಚುನಾವಣೆ ವಿಳಂಬ
Savistara
Bureau Report
[t4b-ticker]













































