SSLC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಹಿಂದಿ ಪರೀಕ್ಷೆ ಮುಂದೂಡಿಕೆ

Picture of Savistara

Savistara

Bureau Report

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಿದ್ದು, ಇದೀಗ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದೆ.ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಪರೀಕ್ಷೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ.ಮಾ.30ಕ್ಕೆ ಮಹಾವೀರ ಜಯಂತಿ ರಜೆ ಹಾಗೂ ಮಾ.31ಕ್ಕೆ ಹಿಂದಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!