ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

Picture of Savistara

Savistara

Bureau Report

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂಪಾಯಿ ಇಳಿಸಿದೆ.ಗುರುವಾರ ತಡರಾತ್ರಿ ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ನಿಂದ 0 ರೂ.ಗೆ ಇಳಿಸಲಾಗಿದೆ.ಇರಾನ್ ಜೊತೆಗಿನ ಯುಎಸ್-ಇಸ್ರೇಲ್ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದರಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಕೇಂದ್ರ ಕಡಿತಗೊಳಿಸಿದೆ.ಅಬಕಾರಿ ಸುಂಕ ಕಡಿತ ನಿರ್ಧಾರ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ಮಾರುಕಟ್ಟೆಯಲ್ಲಿ ನಷ್ಟ ಎದುರಿಸುತ್ತಿದ್ದ ತೈಲ ಕಂಪನಿಗಳಿಗೆ ರಿಲೀಫ್ ನೀಡುವು ನಿರೀಕ್ಷೆ ಇದೆ.ಜಾಗತಿಕ ಅನಿಶ್ಚಿತತೆಯ ಈ ಸಂದರ್ಭದಲ್ಲಿ ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಮತ್ತು ಗ್ರಾಹಕರಿಗೆ ಪರಿಹಾರ ಒದಗಿಸಲು ಇದೊಂದು ಮಹತ್ವದ ಕ್ರಮವೆಂದು ಪರಿಗಣಿಸಲಾಗುತ್ತಿದೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಗಳಲ್ಲಿ ಸದ್ಯ ಯಾವುದೇ ಬದಲಾವಣೆ ಆಗಿಲ್ಲ.

[t4b-ticker]
error: Content is protected !!