ಭದ್ರಾವತಿ : ಪಂಡಿತ್ ದೀನದಯಾಳು ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಸಮಾರೋಪ ಸಮಾರಂಭ

Picture of Savistara

Savistara

Bureau Report

ಭಾರತೀಯ ಜನತಾ ಪಕ್ಷ ಭದ್ರಾವತಿ ಗ್ರಾಮಾಂತರ ಮಂಡಲ ಪ್ರಶಿಕ್ಷಣ ವರ್ಗದ ವತಿಯಿಂದ ಭದ್ರಾವತಿ ತಾಲೂಕಿನ ಗೊಂದಿಯಲ್ಲಿ ಆಯೋಜಿಸಲಾಗಿದ್ದ ಪಂಡಿತ್ ದೀನದಯಾಳು ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಪಕ್ಷ ಸಂಘಟನೆಯ ಕುರಿತು ಮಹಾಶಕ್ತಿಕೇಂದ್ರದ ಪ್ರಮುಖರಿಗೆ ಮತ್ತು ಕಾರ್ಯಕರ್ತರಿಗೆ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮಾರ್ಗದರ್ಶನ ನೀಡಿದರು.

ಈ ವೇಳೆ ಭದ್ರಾವತಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ತೀರ್ಥಯ್ಯ ಅವರು, ಬಿಜೆಪಿ ಮುಖಂಡರಾದ ಮಂಗೋಟೆ ರುದ್ರೇಶ್ ಅವರು, ಮಂಡಲ ಕಾರ್ಯದರ್ಶಿಗಳಾದ ಅಣ್ಣಪ್ಪ ಅವರು, ಹನುಮಂತ್ ನಾಯ್ಕ್ ಅವರು, ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಸರಸ್ವತಿ ಅವರು, ಪ್ರಶಿಕ್ಷಣ ವರ್ಗದ ಸಂಚಾಲಕರಾದ ಚಂದ್ರಶೇಖರ್ ಜಾದವ್ ಅವರು, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶಕುಂತಲಾ ಅವರು, ವಿಶೇಷ ಆಹ್ವಾನಿತರಾದ ಹಾಲೇಶ್ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

[t4b-ticker]
error: Content is protected !!