ಪುರುಲಿಯಾ: ”ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮೀನುಸಿಗುವುದಿಲ್ಲ ಎಂದು ನಾನು ಕೇಳಿದ್ದೇನೆ. ಎಲ್ಲಿಯಾದರೂ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮಾಂಸ ಅಥವಾ ಮೊಟ್ಟೆಗಳನ್ನು ತಿನ್ನಲೂ ಸಾಧ್ಯವಾಗುವುದಿಲ್ಲ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.ರವಿವಾರ ಚುನಾವಣ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ ‘ಬಿಜೆಪಿ ಏಕಪಕ್ಷೀಯ, ಅವರು ಯಾವುದೇ ಧರ್ಮವನ್ನು ನಂಬುವುದಿಲ್ಲ. ಗಲಭೆಗಳನ್ನು ಪ್ರಚೋದಿಸುವ ಮೂಲಕ ಅಧಿಕಾರಕ್ಕೆ ಬರುತ್ತಾರೆ, ಜನರನ್ನು ಕೊಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತಾರೆ” ಎಂದು ತೀವ್ರ ವಾಗ್ದಾಳಿ ನಡೆಸಿದರು.ಬುಡಕಟ್ಟು ಜನಾಂಗದವರ ಮೇಲೆ ಹೆಚ್ಚಿನ ದಾಳಿಗಳು, ಮಹಿಳೆಯರ ಮೇಲಿನ ದಾಳಿಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ನಡೆಯುತ್ತವೆ.ನಮ್ಮ ಬಂಗಾಳಿ ಮಾತನಾಡುವ ಜನರ ಮೇಲೆ ಇತರ ರಾಜ್ಯಗಳಲ್ಲಿ ದಾಳಿ ಮಾಡಲಾಗುತ್ತದೆ. ನಾವು ಯಾರನ್ನೂ ದಬ್ಬಾಳಿಕೆ ಮಾಡುವುದಿಲ್ಲ” ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ, ಮಾಂಸ ತಿನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ
Savistara
Bureau Report
[t4b-ticker]













































