ಪಾಕ್‌ನಲ್ಲಿ ಇಂಧನ ಬೆಲೆ ಭಾರೀ ಹೆಚ್ಚಳ: ಪೆಟ್ರೋಲ್‌ ಲೀಟರ್‌ಗೆ ₹458, ಡೀಸೆಲ್ ₹520!

Picture of Savistara

Savistara

Bureau Report

ಇಸ್ಲಾಮಾಬಾದ್‌: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿಪಾಕಿಸ್ತಾನದಲ್ಲಿ ತೀವ್ರ ಇಂಧನ ಬಿಕ್ಕಟ್ಟು ಉಂಟಾಗಿದೆ. ಪಾಕಿಸ್ತಾನ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಹೊರ್ಮುಜ್ ಜಲಸಂಧಿ ಮುಚ್ಚಿರುವುದೇ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣ ಎನ್ನಲಾಗಿದೆ.

ಸರ್ಕಾರದ ಹೊಸ ಆದೇಶದಂತೆ, ಪಾಕಿಸ್ತಾನದಲ್ಲಿ ಪೆಟ್ರೋಲ್‌ ಬೆಲೆಯನ್ನು ಶೇಕಡ 42.7ರಷ್ಟು ಏರಿಕೆ ಮಾಡಲಾಗಿದೆ.ಇದರೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 458 ಪಾಕಿಸ್ತಾನಿ ರೂಪಾಯಿ ಆಗಿದೆ. ಡೀಸೆಲ್ ದರದಲ್ಲಿ ಶೇಕಡ 54.9ರಷ್ಟು ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್‌ಗೆ 520 ಪಾಕಿಸ್ತಾನಿ ರೂಪಾಯಿ ಆಗಿದೆ. ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿದ್ದು, ಜನಸಾಮಾನ್ಯರ ಮೇಲೆ ಭಾರಿ ಹೊರೆಯಾಗಿ ಪರಿಣಮಿಸಿದೆ.ಇಂಧನ ಬೆಲೆ ಏರಿಕೆ ವಿರೋಧಿಸಿ ಕರಾಚಿಯಲ್ಲಿ ನೂರಾರು ವಾಹನ ಸವಾರರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಪೆಟ್ರೋಲ್-ಡೀಸೆಲ್ ಜತೆಗೆ ಸಿಲಿಂಡ‌ರ್ ಬೆಲೆ ಏರಿಕೆಯೂ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಇದರಿಂದ ದಿನಕೂಲಿ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರಿದೆ ಎಂದು ನಾಗರಿಕರೊಬ್ಬರು ಬೇಸರ ಹೊರಹಾಕಿದ್ದಾರೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!