ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Picture of Savistara

Savistara

Bureau Report

ಬೆಳ್ತಂಗಡಿ: ಅನೇಕ ಮಂದಿ ವಿದ್ಯಾರ್ಥಿಗಳು ನಿರೀಕ್ಷೆ ಇಟ್ಟಿರುವ ದ್ವಿತೀಯ ಪಿಯುಸಿ ಫಲಿತಾಂಶ ಎ.9ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರ ಪ್ರಕಟಣೆ ಎ.8ರಂದು ತಿಳಿಸಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಪ್ರಕಟಣೆ ಮೂಲಕ ತಿಳಿಸಿದ್ದು, ಏ.೭ರಂದು ಫಲಿತಾಂಶ ಪ್ರಕಟಿಸುತ್ತಿಲ್ಲ. ಕೊನೆಯ ಹಂತದ ಮೌಲ್ಯಮಾಪನ ಕೆಲಸ ಬಾಕಿ ಇರುವುದರಿಂದ ಫಲಿತಾಂಶ ಪ್ರಕಟಿಸಲಾಗುತ್ತಿಲ್ಲ ಎಂದು ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್‌ ಮಾಹಿತಿ ಕೊಟ್ಟಿದ್ದರು. ಇದೀಗ ಏ.೯ಕ್ಕೆ ಪರೀಕ್ಷೆ ದಿನಾಂಕ ಮರುನಿಗದಿಯಾಗಿದೆ. ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕ ಹಾಕಿ ಫಲಿತಾಂಶ ನೋಡಬಹುದು. ಅಂಕಪಟ್ಟಿ ಡೌನ್ಫೋಡ್ ಮಾಡಿ, ಪ್ರಿಂಟ್ ಕೂಡಾ ತೆಗೆದುಕೊಳ್ಳಬಹುದು. ಈ ವರ್ಷ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆದಿದ್ದವು. ರಾಜ್ಯದಾದ್ಯಂತ ಒಟ್ಟು 1217 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!