WEATHER | ಉತ್ತರ ಕರ್ನಾಟಕದಲ್ಲಿ ಬಿಸಿಲ ಅಬ್ಬರ ಜೋರು: ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ

Picture of Savistara

Savistara

Bureau Report

ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಉಷ್ಣ ಅಲೆ ಎಚ್ಚರಿಕೆ ನೀಡಿದೆ.ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ರಿಂದ 42 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದಾದ್ಯಂತ ಮುಂದಿನ ಐದು ದಿನಗಳಲ್ಲಿ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಮೈಸೂರು, ಮಂಡ್ಯ ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.ಬಿಸಿಲಿನ ನಡುವೆ ಕೆಲ ಭಾಗಗಳಲ್ಲಿ ಮಳೆಯೂ ಇರುವುದರಿಂದ ಹವಾಮಾನದಲ್ಲಿ ಏರುಪೇರು ಮುಂದುವರಿಯಲಿದೆ.

[t4b-ticker]
error: Content is protected !!