ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಏಪ್ರಿಲ್ 09ರಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 86ರಷ್ಟು ಮಕ್ಕಳು ಪಾಸ್ ಆಗುವ ಮೂಲಕ ಫಲಿತಾಂಶ ದಾಖಲೆ ಮಟ್ಟಕ್ಕೆ ಏರಿಕೆ ಆಗಿದೆ. ಇನ್ನು ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಆ ಮೂಲಕ ವಸತಿ ಶಾಲೆಗಳಲ್ಲೂ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. 72 ವಸತಿ ಕಾಲೇಜುಗಳಲ್ಲಿ ಜಿಇಇ, ಎಸ್ಇಇಟಿ ಮತ್ತು ಕೆಸಿಇಟಿ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ಸಿ ಮಹದೇವಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಮಾಜಕಲ್ಯಾಣ ಸಚಿವ H.C.ಮಹದೇವಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ.97.22 ಮಕ್ಕಳು ತೇರ್ಗಡೆಯಾಗಿದ್ದಾರೆ. ಹಳ್ಳಿ ಮಕ್ಕಳು ಹೆಚ್ಚು ಪಾಸಾಗಿದ್ದಾರೆ, ಅದರಲ್ಲೂ ಹೆಣ್ಣು ಮಕ್ಕಳು ಹೆಚ್ಚು ಪಾಸಾಗಿದ್ದಾರೆ. ಇದು ಬಹಳ ಸಂತೋಷ. ವಸತಿ ಶಾಲೆಗಳಲ್ಲಿ ಈ ಬಾರಿ ಹೆಚ್ಚಿನ ರಿಸಲ್ಟ್ ಬಂದಿದೆ ಎಂದು ಹೇಳಿದರು. ರಾಜ್ಯದಲ್ಲಿ 539 ಎಸ್ಸಿ, 156 ಎಸ್ಟಿ ಮತ್ತು 179 ಹಿಂದುಳಿದ ವರ್ಗಗಳ ವಸತಿ ಶಾಲೆಗಳಿವೆ. ವಿಜ್ಞಾನ ವಿಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತ್ ಭೀಮಪ್ಪ 598 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು. ಇನ್ನು ವಸತಿ ಶಾಲೆಗಳಲ್ಲಿ ಓದಿದ 2,321 ಮಕ್ಕಳು ಡಿಸ್ಟಿಂಕ್ಷನ್, 2487 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ನಲ್ಲಿ ಪಾಸ್ ಆಗಿದ್ದಾರೆ. 72 ವಸತಿ ಕಾಲೇಜುಗಳಲ್ಲಿ JEE, NEET, KCET ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಮಾಜಕಲ್ಯಾಣ ಸಚಿವ ಹೆಚ್ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.
ಸರ್ಕಾರಿ ವಸತಿ ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಚಿವ ಮಹದೇವಪ್ಪ ಮಹತ್ವದ ಘೋಷಣೆ
Savistara
Bureau Report
[t4b-ticker]










































