ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ ಸಿಗ್ನಲ್

Picture of Savistara

Savistara

Bureau Report

ಬೆಂಗಳೂರು: ಬೆಂಗಳೂರು-ಮುಂಬೈ ವಂದೇ ಭಾರತ್‌ ಸ್ಲೀಪರ್‌ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಈ ಸಂಬಂಧ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ.ವಂದೇ ಭಾರತ್ ಸ್ಲೀಪರ್ ರೈಲಿಗೆ ಸಂಸದ ಪಿ.ಸಿ.ಮೋಹನ್ ಬೇಡಿಕೆ ಇಟ್ಟಿದ್ದರು. ಸಂಸದರಿಗೆ ಪತ್ರ ಬರೆದು ಹೊಸ ಟ್ರೈನ್‌ಗೆ ಅನುಮತಿ ಸಿಕ್ಕ ಬಗ್ಗೆ ಅಶ್ವಿನಿ ವೈಷ್ಣವ್ ಮಾಹಿತಿ ಕೊಟ್ಟಿದ್ದಾರೆ. ಡಿಸೆಂಬರ್ 2 ರಂದು ನೈಋತ್ಯ ರೈಲ್ವೆಯ ಸ್ಥಾಯಿ ಸಮಿತಿಯ ಅಧ್ಯಯನ ಭೇಟಿಯ ಸಂದರ್ಭದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಈ ವಿಷಯವನ್ನು ಪ್ರಸ್ತಾಪಿಸಿದ್ದರು.SMVT ಬೆಂಗಳೂರು ಮೂಲ/ಅಂತ್ಯ ನಿಲ್ದಾಣವಾಗಿ ವಂದೇ ಭಾರತ್ ಸ್ಲೀಪರ್ ರೈಲಿಗೆ ಅವರು ಒತ್ತಾಯಿಸಿದ್ದರು. ಈಗ ಇರುವ ರೈಲುಗಳು 24-30 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ಆದರೆ, ಬಸ್‌ಗಳು 16-18 ಗಂಟೆಗಳನ್ನು ತೆಗೆದುಕೊಳ್ಳುತ್ತವೆ. ನಮಗೆ ಬಸ್‌ನಷ್ಟು ವೇಗದ ರೈಲು ಬೇಕು ಎಂದು ತಿಳಿಸಿದ್ದರು.

[t4b-ticker]
error: Content is protected !!