ಕಡಬ; ಕೋಡಿಂಬಾಳ ಬಳಿ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು

Picture of Savistara

Savistara

Bureau Report

ಕಡಬ: ತಾಲೂಕಿನ ಕೋಡಿಂಬಾಳ ಪ್ರದೇಶದ 102 ನೆಕ್ಕಿಲಾಡಿ, ಕೋರಿಯರ್ ಸಮೀಪದಲ್ಲಿರುವ ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು ಶನಿವಾರ ಬೆಳಗ್ಗೆ(ಏ11) ಕಾಣಿಸಿಕೊಂಡಿದೆ. ಒಟ್ಟು 8 ಕಾಡಾನೆಗಳು ಗುಂಪಾಗಿ ಸಂಚರಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸಂಚಾರಿಗಳಲ್ಲಿ ಆತಂಕ ಉಂಟಾಗುತ್ತಿದ್ದಂತೆಯೇ ವಿಷಯ ತಿಳಿದ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬಂದೋಬಸ್ತ್ ಕೈಗೊಂಡಿದ್ದಾರೆ. ಕಾಡಾನೆಗಳ ಚಲನವಲನವನ್ನು ಗಮನಿಸುತ್ತಾ, ಅವುಗಳನ್ನು ಅರಣ್ಯದತ್ತ ಸುರಕ್ಷಿತವಾಗಿ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಮುಂದುವರಿದಿದೆ.

ಅರಣ್ಯ ಅಧಿಕಾರಿಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಕಾಡಾನೆಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಗ್ರಾಮೀಣ ಭಾಗದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.ಸಾರ್ವಜನಿಕರಿಗೆ ಸೂಚನೆ ನೀಡಿರುವ ಅರಣ್ಯ ಇಲಾಖೆ, ಕಾಡಾನೆಗಳ ಹತ್ತಿರ ಹೋಗಬಾರದು, ಫೋಟೋ ಅಥವಾ ವಿಡಿಯೋ ತೆಗೆದುಕೊಳ್ಳಲು ಯತ್ನಿಸಬಾರದು ಹಾಗೂ ರಾತ್ರಿ ಸಮಯದಲ್ಲಿ ಹೊರಗೆ ಅನಾವಶ್ಯಕ ಸಂಚಾರವನ್ನು ತಪ್ಪಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.

ಯಾವುದೇ ಅನಾಹುತ ಸಂಭವಿಸಿದರೆ ತತ್ ಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ. ಸ್ಥಳದಲ್ಲಿ ಇನ್ನೂ ಅರಣ್ಯ ಸಿಬ್ಬಂದಿ ನಿಯೋಜನೆಗೊಂಡಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News Updates

ಇಂದು ರಾತ್ರಿ ಇಡೀ ನಾಗರಿಕತೆಯ ಸರ್ವನಾಶವಾಗಲಿದೆ : ಇರಾನ್ ಮೇಲೆ ಪ್ರಬಲ ದಾಳಿಯ ಎಚ್ಚರಿಕೆ ನೀಡಿದ ಟ್ರಂಪ್ : 48 ಗಂಟೆ ವಿದ್ಯುತ್ ಸಂಪರ್ಕ ಉಪಯೋಗಿಸದೆ ಮನೆಯೊಳಗಿರುವಂತೆ ಭಾರತೀಯರಿಗೆ ಎಚ್ಚರಿಸಿ ಸಹಾಯವಾಣಿ ತೆರೆದ ಕೇಂದ್ರ ಸರ್ಕಾರ..!

[t4b-ticker]
error: Content is protected !!