ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Picture of Savistara

Savistara

Bureau Report

ಬೆಂಗಳೂರು: ಬೇಸಿಗೆ ಆರಂಭದಿಂದಲೇ ಅಬ್ಬರಿಸುತ್ತಿರುವ ಸೂರ್ಯ ಬೆಂಗಳೂರು ಸೇರಿದಂತೆ ರಾಜ್ಯದ ಒಳನಾಡುಗಳಲ್ಲಿ ಮುಂದಿನ ನಾಲ್ಕೈದು ದಿನ ತಾಪಮಾನ ಏರಿಕೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸನಿಹ ಇದೆ. ಈ ಮಧ್ಯೆ ಈಗ ರಾಜ್ಯದ ಬಹುತೇಕ ಕಡೆಗೆ ತಾಪಮಾನ ಏರಿಕೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿಗೆ ಮುಂದಿನ 5 ದಿನ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಸದ್ಯ ನಗರದಲ್ಲಿ 35 ಡಿಗ್ರಿ ದಾಖಲಾಗುತ್ತಿದ್ದು, 37 ರಿಂದ 38 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಹೆಚ್ಚಿನ ಬಿಸಿಲಬ್ಬರದ ಸಾಧ್ಯತೆ ಇದ್ದು, ಅನಗತ್ಯ ಆಚೆ ಓಡಾಟ ಜೊತೆ ಆರೋಗ್ಯದ ಕಡೆ ಹೆಚ್ಚು ಗಮನಹರಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ ಉತ್ತರ ಒಳನಾಡಿನ ಬೀದರ್, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ, ಕಲಬುರಗಿ, ಜಿಲ್ಲೆಗಳಲ್ಲಿ 42 ರಿಂದ 44 ಡಿಗ್ರಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲೂ 2 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಏರಿಕೆಯಾಗುವ ಸಾಧ್ಯತೆ ಇದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!