ಲೆಬನಾನ್-ಇಸ್ರೇಲ್ ನಡುವೆ 10 ದಿನಗಳ ಕದನ ವಿರಾಮ ಒಪ್ಪಂದ ಜಾರಿ: ಡೊನಾಲ್ಡ್ ಟ್ರಂಪ್ ಘೋಷಣೆ

Picture of Savistara

Savistara

Bureau Report

ವಾಷಿಂಗ್ಟನ್, ಎ.16: ಲೆಬನಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ ಎಂದು Aljazeera ವರದಿ ಮಾಡಿದೆ.ಟೂತ್ ಸೋಷಿಯಲ್ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಅವರು, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ‘ಬೀಬಿ’ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದು, ಕದನ ವಿರಾಮ ಒಪ್ಪಂದಕ್ಕೆ ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

“ಲೆಬನಾನ್ ಸ್ಥಳೀಯ ಕಾಲಮಾನ ರಾತ್ರಿ 12 ಗಂಟೆಯ ನಂತರ 10 ದಿನಗಳ ಕಾಲ ಕದನ ವಿರಾಮ ಜಾರಿಯಾಗಲಿದೆ. ಮಂಗಳವಾರ, 34 ವರ್ಷಗಳ ಬಳಿಕ ಮೊದಲ ಬಾರಿಗೆ ಲೆಬನಾನ್ ಮತ್ತು ಇಸ್ರೇಲ್ ಪ್ರತಿನಿಧಿಗಳು ವಾಷಿಂಗ್ಟನ್ ಡಿ.ಸಿ.ಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಚರ್ಚೆ ನಡೆಸಿದ ಹಿನ್ನೆಲೆ ಈ ಬೆಳವಣಿಗೆ ನಡೆದಿದೆ. ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಹಾಗೂ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಶಾಶ್ವತ ಕದನ ವಿರಾಮಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ’ ಎಂದು ಟ್ರಂಪ್ ತಿಳಿಸಿದ್ದಾರೆ.“ವಿಶ್ವದ ವಿವಿಧ ಭಾಗಗಳಲ್ಲಿ ಒಂಭತ್ತು ಯುದ್ಧಗಳನ್ನು ನಿಲ್ಲಿಸುವಲ್ಲಿ ಭಾಗಿಯಾಗಿರುವುದು ಗೌರವದ ಸಂಗತಿ. ಇದು ನನ್ನ 10ನೇ ಪ್ರಯತ್ನವಾಗಿದ್ದು, ಇದನ್ನೂ ಅಂತ್ಯಗೊಳಿಸಲು ಬದ್ಧನಾಗಿದ್ದೇನೆ” ಎಂದು ಟ್ರಂಪ್ ಅವರು ಹೇಳಿದ್ದಾರೆ.

[t4b-ticker]
error: Content is protected !!