ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ

Picture of Savistara

Savistara

Bureau Report

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಶುಲ್ಕ ಪಾವತಿಗೆ ಮೇ 12 ಕೊನೆ ದಿನವಾಗಿದೆ.ಶೇ.85ರಷ್ಟು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಬಿ.ಎಸ್ಸಿ(ಕೃಷಿ) ಅಥವಾ ಬಿಎಸ್ಸಿ (ಆನರ್ಸ್‌) ಕೃಷಿ ಪದವೀಧರರು ಅರ್ಜಿ ಸಲ್ಲಿಸಬಹುದು. ಉಳಿದ ಶೇ.15ರಷ್ಟು ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಬಿ.ಟೆಕ್(ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ), ಬಿ.ಟೆಕ್‌(ಆಹಾರ ತಂತ್ರಜ್ಞಾನ), ಬಿಎಸ್‌ಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ), ಬಿಎಸ್‌ಸ್ಸಿ(ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ, ಬಿಎಸ್‌ಸ್ಸಿ(ಅನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್‌ಮೆಂಟ್, ಬಿಎಸ್‌ಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ), ಬಿ.ಟೆಕ್(ಜೈವಿಕ ತಂತ್ರಜ್ಞಾನ), ಬಿಎಸ್‌ಸ್ಸಿ(ಅಗ್ರಿಕಲ್ಬರಲ್ ಇಂಜಿನಿಯರಿಂಗ್, ಬಿ.ಟೆಕ್(ಅಗ್ರಿಕಲ್ಬರಲ್ ಇಂಜಿನಿಯರಿಂಗ್) ಪದವೀಧರರು ಅರ್ಜಿ ಸಲ್ಲಿಸಬಹುದು.

ಉಳಿಕೆ ಮೂಲ ವೃಂದಕ್ಕೆ ಸೇರಿದ ಒಟ್ಟು 632 ಹುದ್ದೆಗಳಿಗೆ (81 ಕೃಷಿ ಅಧಿಕಾರಿ ಹಾಗೂ 551 ಸಹಾಯಕ ಕೃಷಿ ಅಧಿಕಾರಿ) ಜೂ.7ರಂದು ಹಾಗೂ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 258 ಹುದ್ದೆಗಳಿಗೆ (40 ಕೃಷಿ ಅಧಿಕಾರಿ ಹಾಗೂ 218 ಸಹಾಯಕ ಕೃಷಿ ಅಧಿಕಾರಿ) ಜೂ.14ರಂದು ಲಿಖಿತ ಪರೀಕ್ಷೆ ಇರುತ್ತದೆ. ಎರಡೂ ವೃಂದದವರಿಗೆ ಕನ್ನಡ ಪರೀಕ್ಷೆ ಜೂ.6ರಂದು ನಡೆಯಲಿದೆ.ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್

https://cetonline.karnataka.gov.in/kea/ ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!