ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಾರು ಪೂರ್ವ ಮಳೆ ಅಬ್ಬರ : ಸಿಡಿಲಿಗೆ ವೃದ್ಧೆ ಬಲಿ.!

Picture of Savistara

Savistara

Bureau Report

ಬೆಂಗಳೂರು: ರಾಜ್ಯದ ಹಲವೆಡೆ ಮಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ಸೋಮವಾರದಂದು ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಹಾವೇರಿ, ಹಾಸನ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಮಳೆ ಸುರಿದ ವರದಿಯಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮಾದೀಹಳ್ಳಿಯಲ್ಲಿ ಸಿಡಿಲು ಬಡಿದು ನೀಲಮ್ಮ (70) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮರದ ಕೆಳಗೆ ನಿಂತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ, ಕಳಸ ಸೇರಿದಂತೆ ಹಲವೆಡೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಸುರಿದಿದೆ. ಮಳೆಯ ರಭಸಕ್ಕೆ ಹಲವು ಮರಗಳು ಧರೆಗುರುಳಿವೆ.ಕಲಬುರಗಿ ಜಿಲ್ಲೆಯ ಆಳಂದ ಸಮೀಪದ ಹಿರೋಳ್ಳಿಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಸಾವನ್ನಪ್ಪಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಭಾರಿ ಗಾಳಿ-ಮಳೆ ಕಾಣಿಸಿಕೊಂಡಿದೆ. ಸುಳ್ಯ ತಾಲೂಕಿನ ಕೆಲವು ಕಡೆ ಮರಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ವಿಜಯಪುರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸೇರಿದಂತೆ ಹಲವೆಡೆ ಮಳೆಯಾಗಿ ವಾತಾವರಣ ತಂಪಾಗಿದೆ. ಮಳೆಯ ತೀವ್ರತೆಗೆ ಹಲವು ಕಟ್ಟಡಗಳ ಮೇಲ್ಛಾವಣಿಯ ಶೀಟ್ಗಳು ಹಾರಿಹೋಗಿದ್ದು, ಜನಜೀವನಕ್ಕೆ ಅಸ್ತವ್ಯಸ್ತ ಉಂಟಾಗಿದೆ.

[t4b-ticker]
error: Content is protected !!