ತಮಿಳುನಾಡಿನಲ್ಲಿ ಬಿರುಸಿನ ಮತಬೇಟೆಗೆ ತೆರೆ: ಇಂದು ಮನೆ ಮನೆ ಪ್ರಚಾರಕ್ಕೆ ಅವಕಾಶ!

Picture of Savistara

Savistara

Bureau Report

ತಮಿಳುನಾಡು ವಿಧಾನಸಭೆ ಚುನಾವಣೆಗೆ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ. ಇನ್ನೊಂದು ದಿನದ ಮನೆ ಮನೆ ಮತಬೇಟೆಯ ಬಳಿಕ ಮತದಾನ ನಡೆದು ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಲಿದೆ.ಈ ಬಾರಿಯ ಚುನಾವಣಾ ಪ್ರಚಾರ ಬಹಳ ಬಿರುಸಿನಿಂದ ಕೂಡಿತ್ತು. ಒಂದೆಡೆ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಪಕ್ಷಗಳು ಮತ್ತೆ ಅಧಿಕಾರಕ್ಕೇರಲು ಭರ್ಜರಿ ಮತಯಾಚನೆ ನಡೆಸಿದರೆ, ಮತ್ತೊಂದೆಡೆ ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯು ತಮಿಳುನಾಡು ಗದ್ದುಗೆಗೆ ಏರಲು ಶತಪ್ರಯತ್ನ ನಡೆಸುತ್ತಿದೆ. ಇದರ ಮಧ್ಯೆ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುವ ಮೂಲಕ ಠಕ್ಕರ್ ನೀಡಲು ಮುಂದಾಗಿದೆ.ಇಂದು ಪ್ರಚಾರದ ಕೊನೆಯ ದಿನವಾಗಿದ್ದು, ಎಲ್ಲಾ ಪಕ್ಷಗಳ ಪ್ರಮುಖ ನಾಯಕರು ಕ್ಷೇತ್ರಾದ್ಯಂತ ಓಡಾಡಿ ಮತಯಾಚನೆ ನಡೆಸಿದ್ದಾರೆ.ತಮಿಳುನಾಡಿನಲ್ಲಿ ಈ ಬಾರಿ 234 ವಿಧಾನಸಭಾ ಕ್ಷೇತ್ರಗಳಲ್ಲಿ 4,000 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಏ. 23 ಒಂದೇ ಹಂತದಲ್ಲಿ ಮತದಾನ ನಡೆದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!